ಗಂಗೊಳ್ಳಿಗೆ ಸಂಸದ ಯಡಿಯೂರಪ್ಪ ಭೇಟಿ

ಗಂಗೊಳ್ಳಿ: ಶನಿವಾರ ಸಂಜೆ ಗಂಗೊಳ್ಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ವೀರೇಶ್ವರ ಮಾಂಗಲ್ಯ ಮಂದಿರ ಎದುರು ಜರುಗಿದ ಸಭೆಯನ್ನುದ್ದೇಶಿಸಿ ಮಾತನಾಡಿ ಗಂಗೊಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿ ಕಲೆ ಹಾಕಿದ್ದೇನೆ. ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸ್ ಅಧಿಕಾರಿಗಳು ಸಚಿವರು, ಶಾಸಕರ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸದೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅಯ್ಯಪ್ಪ ವ್ರತಧಾರಿಗಳ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಅಮಾಯಕರ ಮೇಲಿನ ದೌರ್ಜನ್ಯ ಸಹಿಸೋದಿಲ್ಲ ಎಂದು  ಗುಡುಗಿದ್ದಾರೆ. 
      ಕಾಂಗ್ರೆಸ್ ಓಟ್‌ಬ್ಯಾಂಕಿನ ರಾಜಕಾರಣ ಮಾಡಿ ಹಿಂದೂ, ಮುಸ್ಲಿಂ, ಕ್ರೈಸ್ತರ ನಡುವೆ ವಿಷ ಬೀಜ ಬಿತ್ತುತ್ತಿದೆ. ಇದೇ ಕಾರಣಕ್ಕೆ ರಾಷ್ಟ್ರದಲ್ಲಿ ನೆಲೆ ಕಳೆದುಕೊಂಡಿದೆ. ಕಾಂಗ್ರೆಸ್ ಮುಕ್ತ ಭಾರತ ಆಗಬೇಕಾದರೆ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮುಕ್ತವಾಗಬೇಕು ಎಂದು ಅವರು ಹೇಳಿದರು.
    ಶಾಸಕ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ ಕಾವೇರಿ, ಹಿರಿಯ ಮುಖಂಡರಾದ ಪುಂಡಲೀಕ ನಾಯಕ, ಬಿ.ಸದಾನಂದ ಶೆಣೈ, ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ದೀಪಕ್ ಶೆಟ್ಟಿ, ಸ್ಥಳೀಯ ಮುಖಂಡರಾದ ಹರೀಶ್ ಮೇಸ್ತ, ಉಮಾನಾಥ ದೇವಾಡಿಗ, ಪೂರ್ಣಿಮಾ ಖಾರ್ವಿ, ರೇಷ್ಮಾ ಖಾರ್ವಿ, ಸುರೇಂದ್ರ ಖಾರ್ವಿ, ದಿಲೀಪ್ ಖಾರ್ವಿ, ರಾಘವೇಂದ್ರ ನೆಂಪು, ರಾಮಪ್ಪ ಖಾರ್ವಿ, ರವೀಂದ್ರ ಪಠೇಲ್ ಉಪಸ್ಥಿತರಿದ್ದರು. ಬೈಂದೂರು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯು.ಕೆ.ಸದಾನಂದ ಶೇರೆಗಾರ್ ಕಾರ್ಯಕ್ರಮ ನಿರ್ವಹಿಸಿದರು.  

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com