ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ : ಅದೃಷ್ಟ ಕೂಪನ್ ಬಿಡುಗಡೆ

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದದ ವತಿಯಿಂದ ಸಣ್ಣ ಠೇವಣಿದಾರರಿಗೆ ಪ್ರೋತ್ಸಾಹಿಸುವ ಬಗ್ಗೆ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಮನ್ಮಹಾ ರಥೋತ್ಸವದ ಅಂಗವಾಗಿ ದೇವಸ್ಥಾನ ಆಡಳಿತ ಮೊಕೆಸ್ತರಾದ ಶ್ರೀ ಜಯರಾಮ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಅದೃಷ್ಟ ಕೂಪನ್ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಅದೃಷ್ಟ ಕೂಪನ್‌ನ್ನು ಸಂಘದ ಸದಸ್ಯರಾದ ಶ್ರೀನಿವಾಸ ಖಾರ್ವಿ ಉಪ್ಪುಂದ ಹಾಗೂ ಮಂಜುನಾಥ ದೇವಾಡಿಗ ರಥಬೀದಿ ಉಪ್ಪುಂದ ಇವರು ಸ್ವಿಕರಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್ ಹಾಗೂ ದೇವಳದ ಆಡಳಿತ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
     ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮಮತಾ ವಿ. ಮಯ್ಯ ಮತ್ತು ನೌಕರ ವೃಂದದವರು, ಸದಸ್ಯರುಗಳು ಹಾಜರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com