ಜ. 1, 2: ನಿಟ್ಟೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

ಕಾರ್ಕಳ: ರಾಜ್ಯದ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣದ ಅಭಿವೃದ್ಧಿ ಅಭಿಯಾನದ ಸಹಭಾಗಿತ್ವದಲ್ಲಿ ಜ. 1 ಮತ್ತು 2ರಂದು 'ವಿಜ್ಞಾನ ಕೇಂದ್ರದ ಆವಿಷ್ಕಾರ - ಭವಿಷ್ಯದ ಶೈಕ್ಷಣಿಕ ಗ್ರಂಥಾಲಯಗಳು' ಎಂಬ ವಿಷಯದ ಬಗ್ಗೆ ಸಂಸ್ಥೆಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಂಡಿದೆ.

ಜ. 1ರಂದು ಬೆಳಗ್ಗೆ 9.30ಕ್ಕೆ ಮಹಾ ವಿದ್ಯಾಲಯದ ಸಂಭ್ರಮ ಸಭಾಂಗಣದಲ್ಲಿ ಸಂಪನ್ನಗೊಳ್ಳಲಿರುವ ಸಮ್ಮೇಳನದ ಉದ್ಘಾಟನೆಯನ್ನು ಅಂತರಾಷ್ಟ್ರೀಯ ಭಾಷಾ ವಿಜ್ಞಾನಿ (ಸಾಫ್ಟವೇರ್‌) ನಾಡೋಜ ಪ್ರೊ | ಕೆ.ಪಿ. ರಾವ್‌ ನೆರವೇರಿಸಲಿದ್ದಾರೆ. ನಿಟ್ಟೆ ವಿಶ್ವ ವಿದ್ಯಾಲಯದ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಮ್ಮೇಳನದಲ್ಲಿ ಮಂಡಿಸಲಾಗುವ ಪ್ರಬಂಧಗಳ ಸಿಡಿಯನ್ನು ಲೋಕಾರ್ಪಣೆಗೈಯಲ್ಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 08258-281263-332ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ | ನಿರಂಜನ್‌ ಎನ್‌. ಚಿಪ್ಳೂಣ್‌ಕರ್‌ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com