ಕುಂದಾಪುರ: ವಿದ್ಯಾರ್ಥಿಗಳಲ್ಲಿ ಅಂತರ್ಜಾಲ ಬಳಕೆಯ ಕೌಶಲ ಮತ್ತು ಜ್ಞಾನವನ್ನು ಹೆಚ್ಚಿಸುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯು ಇಂಟೆಲ್ ಸಂಸ್ಥೆ ಮತ್ತು ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿ ಅಂತರ್ಜಾಲ ಜಗತ್ತು 2014 ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿಲಾಗಿತ್ತು.
ಕುಂದಾಪುರ ವಲಯದ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 26 ಮತ್ತು 27 ರಂದು ಭಂಡಾರ್ಕರ್ಸ್ ಕಾಲೇಜಿನ ಸಹಯೋಗದೊಂದಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಾರಾಯಣ ಶೆಟ್ಟಿ ಇವರು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಗೋಪಾಲ ಶೆಟ್ಟಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀ ಗಣೇಶ್, ರೋಟರಿ ಕ್ಲಬ್, ಕುಂದಾಪುರದ ಅಧ್ಯಕ್ಷರಾದ ಶ್ರೀ ಮನೋಜ ನಾಯರ್ , ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕರಾದ ಶ್ರೀ ವೆಂಕಟೇಶ ನಾಯಕ ಮತ್ತು ಭಾರತ ಸಂಚಾರ ನಿಗಮದ ಕುಂದಾಪುರ ವಿಭಾಗದ ಎಸ್ ಡಿ ಓ ಕೃಷ್ರಣಮೂರ್ವತಿಯವರು ಉಪಸ್ಥಿತರಿದ್ಧರು. ಶಿಕ್ಷಣ ಸಂಯೋಜಕ ಶ್ರೀ ಉದಯ ಗಾಂವಕಾರ ಎಲ್ಲರನ್ನೂ
ಸ್ವಾಗತಿಸಿ ನಿರೂಪಿಸಿದರು.
0 comments:
Post a Comment