ಡಿ.20: ಯಡ್ತರೆ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ

ಬೈಂದೂರು: ಇಲ್ಲಿನ ಯಡ್ತರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾ ಪುರಸ್ಕಾರ ಮತ್ತು ಮಕ್ಕಳ ಸಾಂಸ್ಕೃತಿಕ ಉತ್ಸವ ಡಿಸೆಂಬರ್ 20ರಂದು ಜರುಗಲಿದೆ.
    ಆ ದಿನ ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ ಬಿಲ್ಲವ ವಹಿಸಲಿದ್ದು,  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಪ್ರಿತಾ ದೀಪಕ್ ಕುಮಾರ್ ಶೆಟ್ಟಿ, ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿದ್ಯಾಂಗ ಉಪನಿರ್ದೇಶಕ ದಿವಾಕರ ಶೆಟ್ಟಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ, ಬೈಂದೂರು ವಲಯ ಕ್ಷೇತ್ರ ಸಮನ್ವಯಾಧಿಕಾರಿ ಎ. ವಿ. ಸುರೇಶ್,ಬೈಂದೂರು  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ವಾಸುದೇವ ರಾವ್ ಹಾಗೂ ರಾಮ ಮೊಗವೀರ ಭಾಗವಹಿಸಲಿದ್ದಾರೆ. ಆ ಬಳಿಕ ಬಹುಮಾನ ವಿತರಣೆ, ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ, ಛದ್ಮವೇಷ ಸ್ವರ್ಧೆ ನಡೆಯಲಿದೆ
      ಮಧ್ಯಾಹ್ನ ಭೋಜನ ಕೂಟವಿದ್ದು ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು , ಶಿಕ್ಷಣ ಮತ್ತು ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ, ಯಡ್ತರೆ ಗ್ರಾ.ಪಂ. ಅಧ್ಯಕ್ಷ ನಾಗರಾಜ ಶೆಟ್ಟಿ, ಉಪಾಧ್ಯಕ್ಷರಾಜ ಕಲಾವತಿ ನಾಗರಾಜ ಗಾಣಿಗ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ ಶೆಟ್ಟಿ, ಇಸ್ಫೋಸಿಸ್ ನ ಲೀಡ್ ಕನ್ಸ್ಲ್ಂಟ್ ಮಹಾಬಲೇಶ್ವರ ಮಯ್ಯ ಮೊದಲಾದವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಶಾಲೆಯ ವೆಬ್ಸೈಟ್ ಅನಾವರಣಗೊಳ್ಳಲಿದೆ.
      ಆ ಬಳಿಕ ವಿವಿಧ ನೃತ್ಯ ವಿನೋದಾವಳಿಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಅಲಿಬಾಬ ಮತ್ತು ನಲವತ್ತು ಕಳ್ಳರು ನಾಟಕ ಪ್ರದರ್ಶಗೊಳ್ಳಲಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎಚ್. ಕೃಷ್ಣಪ್ಪ ಶೆಟ್ಟಿ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com