ಸಂಭ್ರಮದಿ ಜರುಗಿದ ಕೋಟೇಶ್ವರ ಮನ್ಮಹಾರಥೋತ್ಸವ

 ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಂಭ್ರಮ ಸಡಗರದಿಂದ ಜರುಗಿತು. ಮಕರ ಲಗ್ನ ಸುಮೂಹರ್ತದಲ್ಲಿ ಬೆಳಗ್ಗೆ 11.40 ಗಂಟೆಗೆ ಶ್ರೀದೇವರ ರಥಾರೋಹಣ ನಡೆಯಿತು. ತಂತ್ರಿ ಪ್ರಸನ್ನ ಕುಮಾರ ಐತಾಳ್ ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
     ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ 5.15ಗಂಟೆಗೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆಯಲಾಯಿತು. ರಥಾಅವರೋಹಣದ ವಿಧಿ ಪೂರೈಸಲಾಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು  ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು.
   ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ಸಂಜೆಯ ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸಿದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತುಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು.
ಕೊಡಿಹಬ್ಬದ ಅಂಗವಾಗಿ ನಗರದ ಬೀದಿಗಳು ಸಿಂಗಾರಗೊಂಡಿದ್ದು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
















ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com