ಆಳ್ವಾಸ್ ವಿರಾಸತ್-2015ಕ್ಕೆ ವರ್ಣರಂಜಿತ ಚಾಲನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಈ ಬಾರಿ ವಿದ್ಯಾಗಿರಿಯ ಪ್ಯಾಲೇಸ್ ಗ್ರೌಂಡ್‍ನಲ್ಲಿ 4 ದಿನಗಳ ಕಾಲ ನಡೆಯಲಿರುವ ಆಳ್ವಾಸ್ ವಿರಾಸತ್-2015 ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನಕ್ಕೆ ಗುರುವಾರ ಸಂಜೆ ವರ್ಣರಂಜಿತ ಚಾಲನೆ ದೊರೆಯಿತು.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ್ ರೈ ಆಳ್ವಾಸ್ ವಿರಾಸತ್‍ಗೆ ಚಾಲನೆ ನೀಡಿದರು. ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಸೌಹಾರ್ದತೆಯನ್ನು ಮೂಡುಬಿದರೆಯಿಂದ ಎಲ್ಲೆಡೆಗೆ ಪಸರಿಸುತ್ತಿರುವುದು ಸಮಾಜಮುಖಿ ಕೆಲಸ ಶ್ಲಾಘನೀಯ ಎಂದರು. 

ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ವಿರಾಸತ್ ರೂವಾರಿ ಡಾ.ಎಂ.ಮೋಹನ್ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪಟ್ಟಣದ ಜನರು ಮಾತ್ರ ಸಾಂಸ್ಕಂತಿಕ ಕಾರ್ಯಕ್ರಮಗಳನ್ನು ಆಸ್ವಾಧಿಸುವುದಲ್ಲ, ಜನಸಾಮಾನ್ಯರು ಕೂಡ ಕಲೆ, ಸಾಂಸ್ಕøತಿಕ ರಸದೌತಣ ಪಡೆಯಬೇಕೆಂಬ ಉದ್ದೇಶದಿಂದ ಆಳ್ವಾಸ್ ವಿರಾಸತ್ ಮಾಡುತ್ತಿದ್ದೇವೆ. ನೈಜ್ಯ  ಸೌಂದರ್ಯ ಪ್ರಜ್ಞೆ ವಿರಾಸತ್‍ನಲ್ಲಿ ಸಿಗುತ್ತಿರುವುದು ಸಂತೋಷದ ವಿಷಯ ಎಂದರು. 

ವಿದಾನಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ , ಕೆನರಾ ಬ್ಯಾಂಕ್ ಆಡಳಿತ ನಿರ್ದೇಶಕ ವಿ.ಎಸ್.ಕೃಷ್ಣ ಕುಮಾರ್, ಕರ್ನಾಟಕ ಬ್ಯಾಂಕ್ ಆಡಳಿ ನಿರ್ದೇಶಕ ಜಯರಾಮ್ ಭಟ್, ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ.ರಾಜೇಂದ್ರ ಕುಮಾರ್, ಮಾಜಿ ಸಚಿವ ಅಮರನಾಥ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಜಯಶ್ರೀ ಅಮರನಾಥ ಶೆಟ್ಟಿ, ರಾಮಚಂದ್ರ ಶೆಟ್ಟಿ, ಮೀನಾಕ್ಷಿ ಆಳ್ವ,  ನಾಡೋಜ ಡಾ.ಜಿ.ಶಂಕರ್ , ಸುರೇಶ್ ಭಂಡಾರಿ ಮುಂಬೈ ಮೊದಲಾದವರಿದ್ದರು. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.  

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com