ಬಿಜೆಪಿ ಸದಸ್ಯತ್ವ ಅಭಿಯಾನ

ತೆಕ್ಕಟ್ಟೆ: ಪ್ರಧಾನಿ ನರೇಂದ್ರ ಮೋದಿಯವರ ಅನೇಕ ಜನಪರ ಕಾರ್ಯಕ್ರಮಗಳು ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿವೆ. ಪ್ರಧಾನಿ ಕೈಬಲಪಡಿಸುವ ನಿಟ್ಟಿನಲ್ಲಿ ಯುವಜನರು ಬೆಂಬಲಿಸಬೇಕು. ಪಕ್ಷದ ಸದಸ್ಯತ್ವ ಪಡೆಯುವ ಮೂಲಕ ಬಲಿಷ್ಠ ರಾಷ್ಟ್ರನಿರ್ಮಾಣಕ್ಕೆ ಸಹಕರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ತೆಕ್ಕಟ್ಟೆಯಲ್ಲಿ ಜರುಗಿದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. 

ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೆಳ್ವೆ ವಸಂತ ಶೆಟ್ಟಿ, ಜಿ.ಪಂ.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ್ ಕಾವೇರಿ, ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠ ಸಂಚಾಲಕ ಕಿಶೋರ್‌ಕುಮಾರ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸ್ಥಳೀಯ ಬಿಜೆಪಿ ಮುಖಂಡರಾದ ವಿಠಲ ದೇವಾಡಿಗ, ಚಂದ್ರ ಪೂಜಾರಿ, ಪ್ರಕಾಶ್ ಪೂಜಾರಿ, ರವೀಂದ್ರ ದೊಡ್ಮನೆ, ಮಾಲಿನಿ ಸತೀಶ್ ಮೊದಲಾದವರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com