ಕಾಲೇಜು ವ್ಯಕ್ತಿತ್ವ ವಿಕಸನ ಶಿಬಿರ

ಗಂಗೊಳ್ಳಿ: ನಮ್ಮ ಗುಣ, ನಡತೆ, ನಮ್ಮಲ್ಲಿರುವ ಆಸಕ್ತಿಯನ್ನು ನಾವು ಮೊದಲು ತಿಳಿದು ಕೊಳ್ಳುವ ಪ್ರಯತ್ನ ನಡೆಸಬೇಕು. ನಮ್ಮ ವ್ಯಕ್ತಿತ್ವದ ಬಗ್ಗೆ ನಾವೇ ತಿಳಿದುಕೊಳ್ಳದಿದ್ದಲ್ಲಿ ನಮ್ಮ ವ್ಯಕ್ತಿತ್ವ ವಿಕಸನ ಸಾಧ್ಯವಿಲ್ಲ. ಸಾರ್ವಜನಿಕವಾಗಿ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ನಮ್ಮ ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಅಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ಜಿ‌ಎಸ್‌ವಿ‌ಎಸ್ ಅಸೋಸಿಯೇಶನ್ ಅಧ್ಯಕ್ಷ ಬೈಲೂರು ಮಂಜುನಾಥ ಶೆಣೈ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಸನ್ಮತಿ ಪ್ರತಿಷ್ಠಾನ ಶಿವಮೊಗ್ಗ ಹಾಗೂ ಗಂಗೊಳ್ಳಿ ರೋಟರಿ ಕ್ಲಬ್ ಸಹಯೋಗದಿಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಗಂಗೊಳ್ಳಿ ರೋಟರಿ ಕಾರ್ಯದರ್ಶಿ ಕೆ.ರಾಮನಾಥ ನಾಯಕ್, ಶಿಬಿರದ ಸಂಪನ್ಮೂಲ ವ್ಯಕ್ತಿ ಮಹಾದೇವಪ್ಪ,  ಸಹಕಾರಿಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಉಪಸ್ಥಿತರಿದ್ದರು.

ಶಾಲೆಯ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್ ಸ್ವಾಗತಿಸಿದರು. ಉಪನ್ಯಾಸಕ ಥೋಮಸ್ ಪಿ.ಎ. ಕಾರ್ಯಕ್ರಮ ನಿರೂಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com