ಗಂಗೊಳ್ಳಿಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

ಗಂಗೊಳ್ಳಿ:   ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರದ್ಲಾಂಜೆ ಇಂದು ಗಂಗೊಳ್ಳಿಗೆ ಭೇಟಿ ನೀಡಿ ಗಂಗೊಳ್ಳಿಯಲ್ಲಿ ದುಷ್ಕರ್ಮಿಗಳಿಂದ ಹಾನಿಗೀಡಾಗಿರುವ ಅಂಗಡಿ ಹಾಗೂ ವಾಹನಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ದುಷ್ಕರ್ಮಿಗಳ ಕೃತ್ಯವನ್ನು ಸಿಸಿಟಿವಿಯಲ್ಲಿ ವೀಕ್ಷಿಸಿದ ಸಂಸದೆ ಶೋಭಾ ಕರದ್ಲಾಂಜೆ,  ಈ ಪ್ರಕರಣದಲ್ಲಿ ನ್ಯಾಯ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು.

ಅಂಗಡಿ ಮಾಲಕ ವೆಂಕಟೇಶ ಶೆಣೈ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಕೂಡಲೇ ಪತ್ತೆ ಹೆಚ್ಚುವ ಕಾರ್ಯ ನಡೆಯಬೇಕು. ಎಂದು ಮನವಿ ಮಾಡಿದರು.ಭಾಸ್ಕರ ವಿಟuಲ ಶೆಣೆ„, ಜಿ. ವಿಟuಲ ಬಿ. ಶೆಣೈ, ಜಿ. ವಿಜಯ ಬಿ. ಶೆಣೈ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬೆ„ಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ಎಂ.ಸುಕುಮಾರ್‌ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುರಾಜ್‌ ಗಂಟಿಹೊಳೆ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ತ್ರಾಸಿ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ ಮೇಸ್ತ, ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ರವೀಂದ್ರ ಪಟೇಲ್‌, ಯುವಮೋರ್ಚಾ ಅಧ್ಯಕ್ಷ ದಿಲೀಪ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

ಬಳಿ ಹೆಮ್ಮಾಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗೊಳ್ಳಿಯಲ್ಲಿ ನಡೆದ ದುಷ್ಕತ್ಯಕ್ಕೆ ಭಯೋತ್ಪಾದಕ ಚಟುವಟಿಕೆಗಳ ನಂಟಿರುವ ಸಾಧ್ಯತೆಗಳಿದ್ದು, ರಾಜ್ಯ ಸರಕಾರ ಈ ವಿಚಾರ ರಾಜಕೀಯಗೊಳಿಸದೆ ಇಂತಹ ಚಟುವಟಿಕೆ ನಡೆಸುತ್ತಿರುವವರನ್ನು ಮಟ್ಟ ಹಾಕಬೇಕು. ಇಂತಹ ದುಷ್ಕತ್ಯ ನಡೆಸುವವರ ಜಾಡು ಕಂಡು ಹಿಡಿಯಲು ಮತ್ತು ಘಟನೆಯ ಸಮಗ್ರ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಸಂಸದೆ ಶೋಭಾ ಕರದ್ಲಾಂಜೆ ಆಗ್ರಹಿಸಿದ್ದಾರೆ.

ಗಂಗೊಳ್ಳಿಯಲ್ಲಿ ಅಂಗಡಿ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಿರಿಯ ಅಧಿಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ ಎಂದರು.

ಭಟ್ಕಳದ ಭಯೋತ್ಪಾದಕರಿಂದ ಪ್ರೇರಿತರಾಗಿ ಭಯೋತ್ಪಾದನೆ ಮತ್ತು ದೇಶದ್ರೋಹಿ ಚಟುವಟಿಕೆ ನಡೆಸುತ್ತಿರುವವರ ಬಂಧನವಾಗುತ್ತಿದ್ದು, ಈ ವಿಚಾರವನ್ನು ಬೇರೆಡೆ ಸೆಳೆಯಲು ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ. ಭಟ್ಕಳದ ಭಯೋತ್ಪಾದಕರು ಮತ್ತು ದೇಶದ್ರೋಹಿ ಚಟುವಟಿಕೆಗಳಲ್ಲಿ ನಿರತರಾಗಿರುವರಿಗೆ ಗಂಗೊಳ್ಳಿ ಪ್ರಕರಣದೊಂದಿಗೆ ನಂಟಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಾಂಗ್ರೆಸ್‌ ಆಡಳಿತದ ಅವಧಿಧಿಯಲ್ಲಿ ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದೆ ಎಂಬ ಧೈರ್ಯದಿಂದ ವಿವಿಧೆಡೆ ಇಂತಹ ಕೃತ್ಯಗಳನ್ನು ಎಸಗಲಾಗುತ್ತಿದೆ. ಗಂಗೊಳ್ಳಿ ಪ್ರಕರಣದಲ್ಲಿ ಸಿಲುಕಿರುವ ಆರೋಪಿಯೋರ್ವರು ನಾಟಕೀಯವಾಗಿ ಶಿಕ್ಷೆಯಿಂದ ತಪ್ಪಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com