ಸರಕಾರಿ ನೌಕರರ ಕ್ರೀಡೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಇತ್ತಿಚಿಗೆ ನಡೆದ 2014-15ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ  45 ವರ್ಷದ ಒಳಗಿನವರ ಶಟಲ್ ಬ್ಯಾಡ್ ಮಿಟನ್ ಸಿಂಗಲ್ಸ್ ಮತ್ತು ಡಬಲ್ಸ್  ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಬೈಂದೂರು ಅರಣ್ಯ ಇಲಾಖೆಯ ನೌಕರ ವಿನೋದ್ ಕುಮಾರ್ ಹಾಗೂ  4X400 ಮೀಟರ್ ರಿಲೇ ಯಲ್ಲಿ ಪ್ರಥಮ ಸ್ಥಾನ ಪಡೆದ ಕುಂದಾಪುರ ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಗಣೇಶ ಶೆಟ್ಟಿ, ಇರ್ವರೂ  28ರಂದು ಮಂಡ್ಯದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಗಣೇಶ ಶೆಟ್ಟಿ 100 ಮೀಟರ್ ಓಟದಲ್ಲಿ ದ್ವಿತೀಯ, 400 ಮೀಟರ್ ಓಟ, 4X100 ಮೀಟರ್ ರಿಲೆಯಲ್ಲಿ ತೃತೀಯ ಸ್ಥಾನ ಪಡೆದಿದ್ದರು. 


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

1 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com