ಕೊಲ್ಲೂರಿನಲ್ಲಿ ಖ್ಯಾತ ಗಾಯಕ ಜೇಸುದಾಸ್

ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕ ಪದ್ಮಭೂಷಣ ಡಾ. ಕೆ.ಜೆ.ಜೇಸುದಾಸ್ ತಮ್ಮ 75ನೇ ಹುಟ್ಟುಹಬ್ಬವನ್ನು ಕೊಲ್ಲೂರು ದೇವಳದಲ್ಲಿ ಆಚರಿಸಿಕೊಂಡರು.  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಪತ್ನಿ ಪ್ರಭಾ ದಾಸ್ ಹಾಗೂ ಹಿರಿಯ ಪುತ್ರ ವಿನೋದ ಅವರೊಂದಿಗೆ ಭೇಟಿ ನೀಡಿದ ಅವರು ಚಂಡಿಕಾ ಹೋಮ ನೆರವೇರಿಸಿದ ಬಳಿಕ ದೇವಸ್ಥಾನದ ಪ್ರಾಂಗಾಣದಲ್ಲಿ ಭಕ್ತಿ ಸಂಗೀತ ಕಛೇರಿ ನೀಡಿದರು. ಕಾಂಜ್ಞಗಾಡು ರಾಮಚಂದ್ರನ್ ಹಾಗೂ ಇತರ ಪ್ರಸಿದ್ದ ಕಾಲಾವಿದರು ಅವರಿಗೆ ಹಿಮ್ಮೇಳನದಲ್ಲಿ ಸಾಥ್ ನೀಡಿದರು. 
ತಮ್ಮ ನೆಚ್ಚಿನ ಗಾಯಕ ಜೇಸುದಾಸ್ ಅವರ ಹುಟ್ಟು ಹಬ್ಬದ ಆಚರಣೆಗಾಗಿ ಕೇರಳ ಹಾಗೂ ದೇಶದ ವಿವಿಧ ಭಾಗಗಳಿಂದ ಬಂದಿದ್ದ ದೊಡ್ಡ ಸಂಖ್ಯೆಯ ಅಭಿಮಾನಿಗಳು, ಸಂಗೀತ ಕಚೇರಿಯ ಮಧುರ ಘಳಿಗೆಗೆ ಸಾಕ್ಷಿಗಳಾಗಿದ್ದರು. ಶ್ರೀ ಕ್ಷೇತ್ರದ ಹಿರಿಯ ಅರ್ಚಕರಾದ ಎನ್.ಗೋವಿಂದ ಅಡಿಗ ಹಾಗೂ ತಂತ್ರಿ ರಾಮಚಂದ್ರ ಅಡಿಗ ಅವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿಗಳನ್ನು ನೆರವೇರಿಸಿದ ಜೇಸುದಾಸ್ ಕುಟುಂಬಿಕರು, ಬಳಿಕ ಶ್ರೀದೇವಿಯ ದರ್ಶನ ಪಡೆದರು.
 1972ರಿಂದ ಪ್ರತಿವರ್ಷ ಜೇಸುದಾಸ್ ತಮ್ಮ ಹುಟ್ಟುಹಬ್ಬದಂದು ಕೊಲ್ಲೂರಿಗೆ ಭೇಟಿ ನೀಡಿ ಶ್ರಿದೇವಿಗೆ ಪೂಜೆ ಸಲ್ಲಿಸಿದ ಬಳಿಕ ಸಂಗೀತ ಕಛೇರಿ ನೀಡುವ ಪರಿಪಾಠವಿಟ್ಟುಕೊಂಡಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com