ಶುಭದಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

ಕಿರಿಮಂಜೇಶ್ವರ: ಶುಭದಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವವು ಇತ್ತೀಚಿಗೆ ಜರುಗಿತು. ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಧ್ವಜಾರೋಹಣ ಮಾಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    ಜಿಪಂ ಸದಸ್ಯ ಕೆ.ಬಾಬು ಶೆಟ್ಟಿ ಶಾಲೆಯು ಸತತವಾಗಿ ಶೇಕಡಾ 100 ಫಲಿತಾಂಶ ಪಡೆದುದರ ಬಗ್ಗೆ ಮೆಚ್ಚುಗೆಯ ವ್ಯಕ್ತಪಡಿದರು. ಮತ್ತು ಶಾಲೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದು ಉತ್ತಮ ಶಾಲೆಯೆಂದು ಗುರುತಿಸಿಕೊಂಡಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
      ಪ್ರೊ. ಅನಿಲ್ ಕುಮಾರ್ ಶೆಟ್ಟಿ ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ಯಾವ ರೀತಿ ನಡೆದುಕೊಳ್ಳಬೇಕು. ಮತ್ತು ಪ್ರೀತಿ-ನೀತಿ-ಭೀತಿಯ ನಡುವಿನ ವ್ಯತ್ಯಾಸವು ನಮ್ಮ ಜೀವನದಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು ಎಂಬುದನ್ನು ಕನ್ನಡ ವಚನಗಳ ಮುಖೇನ ಮನದಟ್ಟು ಮಾಡಿದರು. ಶಾಲೆಯ ಅಧ್ಯಕ್ಷ ಡಾ.ಎನ್.ಕೆ.ಬಿಲ್ಲವ ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳ ಪಾತ್ರಗಳ ಬಗ್ಗೆ ಹಿತವಚನ ನೀಡಿದರಲ್ಲದೇ ಕಳೆದ 20 ವರ್ಷಗಳ ಸಂಸ್ಥೆಯ ಸಾಧನೆಯ ಬಗ್ಗೆ ವಿವರಣೆ ನೀಡಿದರು.
      ಶುಭದಾ ಎಜುಕೇಶನಲ್ ಟ್ರಸ್ಟ್‌ನ ವ್ಯವಸ್ಥಾಪಕಿ ಶುಭದಾ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿಂದಿನ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕವನ್ನು ಗಳಿಸಿದ ವಿದ್ಯಾರ್ಥಿನಿ ಸ್ಪಂದನಾಳ ಪೋಷಕರಾದ ಆನಂದ ಶೆಟ್ಟಿ ಮತ್ತು ನಾಗರತ್ನ ಶೆಟ್ಟಿ ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು. ಜಿಪಂ ಸದಸ್ಯ ಅನಂತ ಮೊವ್ವಾಡಿ, ಎ. ಭಾಸ್ಕರ ಹೆಬ್ಬಾರ್, ಟ್ರಸ್ಟಿಗಳು ಮತ್ತು ಶಾಲಾ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
    ಶಾಲಾ ಮುಖ್ಯಶಿಕ್ಷಕ ಹೆಚ್.ಎನ್.ಐತಾಳ್‌ರವರ ನೇತೃತ್ವದಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com