ಆರೋಹ- 2015: ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಸಂಪನ್ನ

ಕೋಟ: ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ 'ಆರೋಹ- 2015' ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾಬುಕಳ ಬಿ.ಡಿ ಶೆಟ್ಟಿ ಕಾಲೇಜು ಪ್ರಥಮ ಸ್ಥಾನ ಪಡೆಯಿತು. 

ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜು ದ್ವಿತೀಯ ಸ್ಥಾನ, ಉಡುಪಿಯ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ತತೀಯ ಸ್ಥಾನ ಪಡೆಯಿತು. ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಮಾಬುಕಳ ಬಿ.ಡಿ ಶೆಟ್ಟಿ ಕಾಲೇಜಿನ ದಿವ್ಯ ಆರ್. ಪಡೆದರೆ, ನಿಮ್ಮ ಆಯ್ಕೆ ವಿಭಾಗದಲ್ಲಿ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಪ್ರದರ್ಶನ ಆಯ್ಕೆಗೊಂಡಿತು. 

ಉದ್ಘಾಟನೆ ಆರೋಹ-2015ವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸಿದರು. ಪ್ರಿನ್ಸಿಪಾಲ್ ಡಾ.ರಾಜೇಂದ್ರ ಎಸ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕೋಟ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ.ಕುಂದರ್ ಮಾತನಾಡಿದರು. ದೇಹದಾಡ್ಯ ಪಟು ಮಂಜುನಾಥ ಎಸ್.ಕಾವಡಿ, ಸಿಬ್ಬಂದಿ ರಘುರಾಮ್, ರಾಘವೇಂದ್ರ ಅವರನ್ನು ಸಮ್ಮಾನಿಸಲಾಯಿತು. ವಿಕಲ ಚೇತನರಿಗೆ, ಆರ್ಥಿಕ ದುರ್ಬಲರಿಗೆ ಸಹಾಯಧನ ಹಸ್ತಾಂತರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಉದ್ಯಮಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಮನೋವೈದ್ಯ ಡಾ.ಪ್ರಕಾಶ್ ತೋಳಾರ್, ಉದ್ಯಮಿ ಬಿಜು ನಾಯರ್ ಉಪಸ್ಥಿತರಿದ್ದರು. 

ಸಮಾರೋಪ ಸಮಾರಂಭ : ಕಾಲೇಜು ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೋಟ ಅಮತೇಶ್ವರಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ.ಕುಂದರ್ ವಿಜೇತರಿಗೆ ಪ್ರಶಸ್ತಿ ವಿತರಿಸಿದರು. ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೆಳ್ವೆ ವಸಂತ ಶೆಟ್ಟಿ, ತಾಪಂ ಸದಸ್ಯರಾದ ರಾಘವೇಂದ್ರ ಕಾಂಚನ್, ಭರತ್ ಕುಮಾರ್ ಶೆಟ್ಟಿ, ಪಡುಕರೆ ಕಾಲೇಜಿನ ನಿಕಟಪೂರ್ವ ಪ್ರಿನ್ಸಿಪಾಲ್ ವಸಂತರಾಜ್ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಪಡುಕರೆ ಸರಕಾರಿ ಪ್ರೌಢಶಾಲೆಯ ಮುಖೋಪಾಧ್ಯಾಯ ಪ್ರಕಾಶ್ ಹೆಬ್ಬಾರ್, ಪ್ರಾಥಮಿಕ ಶಾಲಾ ಮುಖೋಪಾಧ್ಯಾಯ ವಿಷ್ಣುಮೂರ್ತಿ ಹೆಬ್ಬಾರ್, ಕೋಟ ಅಘೋರೇಶ್ವರ ಯುವಕ ಮಂಡಲದ ಅಧ್ಯಕ್ಷ ಪ್ರಭಾಕರ ನಾಯರಿ, ಗುತ್ತಿಗೆದಾರ ದಿನೇಶ್ ಪಡುಕರೆ, ಉದ್ಯಮಿ ಸಂದೀಪ್ ಕುಂದರ್, ಪ್ರಮೋದ್ ಕಾಮತ್, ಪ್ರಗತಿಪರ ಕಷಿಕ ರವೀಂದ್ರ ಐತಾಳ್, ತೀರ್ಪುಗಾರರಾದ ನರೇಂದ್ರ ಕುಮಾರ್ ಕೋಟ, ಕಸ್ತೂರಿ ಶೆಟ್ಟಿ, ಮಂಜುನಾಥ್ ಶೆಟ್ಟಿ, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಎಚ್.ಕುಂದರ್, ಪ್ರಗತಿಪರ ಚಿಂತಕ ಉದಯ್ ಕುಮಾರ್ ಶೆಟ್ಟಿ ಪಡುಕರೆ, ಕಾರ್ಯಕ್ರಮದ ವಿದ್ಯಾರ್ಥಿ ಪ್ರಮುಖ ಪವನ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com