ಆನಂದ ಕುಂದರ್‌ಗೆ ಧರ್ಮರತ್ನ ಪ್ರಶಸ್ತಿ ಪ್ರದಾನ

ಕೋಟ: ಅಮೃತೇಶ್ವರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ದಾನಿ, ಉದ್ಯಮಿ ಆನಂದ ಸಿ. ಕುಂದರ್ ಅವರಿಗೆ ಸಂಜೆ ಕೋಟ ಅಮೃತೇಶ್ವರೀ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಟ ನಾಗರಿಕ ಹೋರಾಟ ಸಮಿತಿಯಿಂದ ದೇವಾಲಯ ಬಹು ಬೇಗನೇ ಜೀರ್ಣೋದ್ಧಾರಗೊಂಡ ಪ್ರಯುಕ್ತ ಆನಂದ ಸಿ. ಕುಂದರ್ ಅವರಿಗೆ ಧರ್ಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
     ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ದೇವಾಲಯದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ.ಜಿ. ಶಂಕರ್, ಮಾಜಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಕೂಟ ಬ್ರಾಹ್ಮಣ ಮಿತ್ರ ಮಂಡಳಿಯ ಗೌರವ ಕಾರ್ಯದರ್ಶಿ ಜಿ. ಶ್ರೀಧರ ಮಯ್ಯ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇದಮೂರ್ತಿ ಎಂ. ಮಧುಸೂಧನ ಬಾಯರಿ, ಆನಂದ ಸಿ. ಕುಂದರ್ ಅವರ ಪತ್ನಿ ಗೀತಾ ಕುಂದರ್, ದೇವಳದ ಕಾರ್ಯನಿರ್ವಹಣಾಧಿಕಾರಿ ಟಿ.ಜಿ. ಸುಧಾಕರ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ರಾಜೀವ ದೇವಾಡಿಗ ವಂದಿಸಿದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com