ರಾಷ್ಟ್ರೀಯ ಯುವ ದಿನ ಆಚರಣೆ

ಮರವಂತೆ:   ಸ್ವಾಮಿ ವಿವೇಕಾನಂದರ ತತ್ವಾದರ್ಶಗಳ ಪಾಲನೆಯೊಂದಿಗೆ ಉತ್ತಮ ಶಿಕ್ಷಣ, ಸಂಸ್ಕಾರವನ್ನು ಪಡೆದುಕೊಂಡು ವಿದ್ಯಾರ್ಥಿಗಳು ಆದರ್ಶಪ್ರಾಯರಾಗಬೇಕು. ಪ್ರತಿಯೊಬ್ಬರೂ ಸ್ವಹಿತ ಚಿಂತನೆ ಬದಿಗಿಟ್ಟು ರಾಷ್ಟ್ರಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ತ್ಯಾಗ, ಬಲಿದಾನಗಳ ಮೂಲಕ ಸಾಗಿಬಂದ ದೇಶದ ಮಹಾನ್ ಪರಂಪರೆಯನ್ನು ಗೌರವದಿಂದ ಮುಂದಕ್ಕೆ ಕೊಂಡೊಯ್ಯಲು ಯುವಜನತೆ ಸದಾ ಸನ್ನದ್ಧರಾಗಿರಬೇಕು ಎಂದು ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರು ಹೇಳಿದರು.
  ಬಡಾಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೀನಾ ತಂಡದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೧೫೨ನೇ ಜನ್ಮದಿನದ ಅಂಗವಾಗಿ ಸೋಮವಾರ ಜರಗಿದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಹಕ್ರೆಮನೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. 
  ಮುಖ್ಯ ಅತಿಥಿ ಎಸ್‌ಡಿಎಂಸಿ ನಾಮನಿರ್ದೇಶನ ಸದಸ್ಯ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಶೆಟ್ಟಿ ಬಡಾಕೆರೆ, ಶಾಲಾ ಸಹಶಿಕ್ಷಕರಾದ ಗಣೇಶ್ ಶೆಟ್ಟಿ, ಜಯಲಕ್ಷ್ಮೀ, ಸರೋಜ ಆಚಾರ್, ಗೌರವಶಿಕ್ಷಕಿ ಆಶಾ ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದರ ಕುರಿತು ರಸಪ್ರಶ್ನೆ ಹಾಗೂ ಗೀತಗಾಯನ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
  ಮೀನಾ ತಂಡದ ಸದಸ್ಯೆ ರಕ್ಷಿತಾ ಅವರು ಸ್ವಾಗತಿಸಿದರು. ಮುಖ್ಯಶಿಕ್ಷಕ ಮಹಾಬಲ ಕೆ. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೀನಾ ತಂಡದ ಪ್ರೇರಕಿ ಶುಭ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com