ಕುಂದಾಪುರದಲ್ಲಿ ಗಣರಾಜ್ಯೋತ್ಸವ ಆಚರಣೆ

ಕುಂದಾಪುರ: ಸಹೋದ ರತೆ, ಸಹಬಾಳ್ವೆಗೆ ಒತ್ತು ನೀಡಿದ ಮಹಾನ್‌ದೇಶವಿದು. ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ತಡೆಯಬೇಕು ಎಂದು ಕುಂದಾಪುರ ಸಹಾಯಕ ಕಮಿಷನರ್ ಚಾರುಲತಾ ಸೋಮಲ್ ಹೇಳಿದರು. 

ಇಲ್ಲಿನ ಗಾಂಧಿಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ 65ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ತಹಸೀಲ್ದಾರ್‌ಗಾಯತ್ರಿ ಎನ್. ನಾಯಕ್, ಜಿ.ಪಂ.ಸದಸ್ಯ ಗಣಪತಿ ಟಿ.ಶ್ರೇಯಾನ್, ಪುರಸಭೆ ಅಧ್ಯಕ್ಷೆ ಯು.ಎಸ್.ಕಲಾವತಿ, ಕುಂದಾಪುರ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಕುಂದಾಪುರ ಡಿವೈಎಸ್ಪಿ ಮಂಜುನಾಥ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಹಾಗೂ 2014ರ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮೇಘನಾ ಅವರನ್ನು ಸನ್ಮಾನಿ ಸಲಾಯಿತು. ಕಂದಾಯ ಇಲಾಖೆ ಹಾಗೂ ಸಹಾಯಕ ಕಮಿಷನರ್ ಕಚೇರಿಯ ಸಿಬ್ಬಂದಿಗಳ ವತಿಯಿಂದ ಕುಂದಾಪುರ ಬ್ಲಡ್ ಬ್ಯಾಂಕ್‌ಗೆ ರೂ.50 ಸಾವಿರ ದೇಣಿಗೆ ನೀಡಲಾಯಿತು. 

ಪಿಎಸ್‌ಐ ನಾಸೀರ್ ಹುಸೇನ್ ನೇತತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ವಿ.ಕೆ.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವಂದೇಮಾತರಂ ಗಾಯನ ನಡೆಸಿಕೊಟ್ಟರು. ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ತಂಡ ಗಮನಸೆಳೆಯಿತು. ಬಳಿಕ ಸಾಂಸ್ಕೃತಿಕ ವೈವಿಧ್ಯ ಸಂಪನ್ನಗೊಂಡಿತು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com