ಶಿರೂರಿನಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ

ಬ್ಯೆಂದೂರು: ಎಕಕಾಲದಲ್ಲಿ 12 ವಾರ್ಡ್‌ಗಳಲ್ಲಿ ನಮ್ಮ ಮನೆ-ನಮ್ಮ-ಊರು ಸ್ವಚ್ಚ ತೆ, ಗ್ರಾಮ ಪಂಚಾಯತ್ ಶಿರೂರು, ವಿವಿಧ ಸಂಘ ಸಂಸ್ಥೆಗಳು, ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಶಿರೂರಿನಲ್ಲಿ ನಡೆಯಿತು. ಬ್ಯೆಂದೂರು ಶಾಸಕ ಕೆ.ಗೋಪಾಲ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.





ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಉಡುಪಿ ಜಿ.ಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ತಾ.ಪಂ ಸದಸ್ಯೆ ಸಾವಿತ್ರಿ ಅಳ್ವೆಗದ್ದೆ ಹಾಜರಿದ್ದರು
ಶಿರೂರು ಗ್ರಾ.ಪಂ ಅಧ್ಯಕ್ಷ ರಾಮ ಮೇಸ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪಂಚಾಯತ್ ಅಭಿವೃದ್ದಿ ಅದಿಕಾರಿ ನಾಗವೇಣಿ ಸ್ವಾಗತಿಸಿದರು.ಪುಷ್ಪರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಂಕರ ಬಿಲ್ಲವ ವಂದಿಸಿದರು.

ಶಾಲಾ ಕಾಲೇಜು, ಸಂಘ ಸಂಸ್ಥೆಗಳು, ಸ್ವ-ಸಹಾಯ ಸಂಘಗಳು, ಶಿರೂರು ಅಸೋಶಿಯೇಷನ್ ಸೇರಿ ನೂರಾರು ಸಂಘ ಸಂಸ್ಥೆಗಳು ಭಾಗವಹಿಸಿದ್ದವು..
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com