ತುಳು ಪ್ರತಿಭಾ ಸ್ಪರ್ಧೆಗೆ ಆಹ್ವಾನ

ಉಡುಪಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಫೆ.3 ರಂದು ಅಂತರ್ ಕಾಲೇಜು ತುಳು ಕನ್ನಡ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿದ್ದು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. ನಿಗದಿತ ಸಮಯದಲ್ಲಿ ಅತೀ ಹೆಚ್ಚು ತುಳು ಗಾದೆಗಳನ್ನು ಬರೆಯುವ ಸ್ಪರ್ಧೆ, ವೈಯಕ್ತಿಕವಾಗಿ ತುಳು ಸಿನಿಮಾ ಗೀತೆಗಳನ್ನು ಹಾಡುವ ಸ್ಪರ್ಧೆ, ರಸಪ್ರಶ್ನೆ ನಡೆಯಲಿದ್ದು, ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ನಗದು ಬಹುಮಾನ, ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತದೆ. ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ತಮ್ಮ ಹೆಸರು, ತರಗತಿ, ವಿಳಾಸ, ದೂರವಾಣಿ ಸಂಖ್ಯೆಯನ್ನು ಪ್ರಾಂಶುಪಾಲರ ದಢೀಕರಣದೊಂದಿಗೆ ಜ.30 ರ ಒಳಗೆ ನೋಂದಾಯಿಸಿ ಕೊಳ್ಳಬೇಕು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com