ವಾರಾಹಿ ನೀರು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕುಂದಾಪುರ: ವಾರಾಹಿ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಿ ರೈತರ ಹೊಲಗಳಿಗೆ ನೀರು ಹಾಯಿಸುವಂತೆ ಆಗ್ರಹಿಸಿ ಇಲ್ಲಿನ ಭಂಡಾರ್‌ಕಾರ್ಸ್‌ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. 

ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿಗಳು, ಕಂದಾಯ ಇಲಾಖೆ ತನ್ನ ಜವಾಬ್ದಾರಿ ಅರಿತು ತಕ್ಷಣ ಯೋಜನೆ ಪೂರ್ಣತ್ವದ ಕುರಿತು ಗಮನಹರಿಸಬೇಕು. 35 ವರ್ಷಗಳಿಂದ ಆಮೆ ನಡಿಗೆಯಲ್ಲಿ ಸಾಗುತ್ತಿರುವ ಯೋಜನೆಗೆ ಪೂರ್ಣವಿರಾಮ ಹಾಡಬೇಕು. ರೈತರ ಭೂಮಿಗೆ ನೀರು ಹರಿಸಬೇಕು. ರೈತ ಸಂಘ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಪೂರ್ಣ ಬೆಂಬಲ ನೀಡುತ್ತಿದ್ದೇವೆ. ಸರಕಾರ ತಕ್ಷಣ ಸ್ಪಂದಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. 

ತಹಸೀಲ್ದಾರ್ ಗಾಯತ್ರಿ ಎನ್. ನಾಯಕ್ ಮನವಿ ಸ್ವೀಕರಿಸಿದರು. ವಿದ್ಯಾರ್ಥಿ ಮುಖಂಡರಾದ ಕಾರ್ತಿಕ್, ನಾಗರಾಜ್, ಸುಮಂತ್, ರಾಘವೇಂದ್ರ, ಹರೀಶ್, ಪ್ರಶಾಂತ್, ರಕ್ಷಿತಾ, ಜ್ಞಾನೇಶ್, ವೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಭಟನೆಗೆ ಮೊದಲು ಕುಂದಾಪುರ ನಗರ ವ್ಯಾಪ್ತಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com