ವಾರಾಹಿ: ಅಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೆ, ಆಸ್ಕರ್ ಭೇಟಿ

ಸಿದ್ದಾಪುರ: ವಾರಾಹಿ ಕಾಲುವೆಯಲ್ಲಿ ನೀರು ಹರಿಸುವ ಬಗ್ಗೆ ಅರಣ್ಯ, ನೀರಾವರಿ, ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿ, ಜ. 14, 15ರಂದು ಈ ಭಾಗಕ್ಕೆ ಕರೆತರಲಾಗುವುದು. ಕಾರ್ಕಳದಲ್ಲಿ ನಡೆಯಲಿರುವ ಮಹಾ ಮಸ್ತಾಭಿಷೇಕಕ್ಕೆ ಆಗಮಿಸುವ ಮುಖ್ಯಮಂತ್ರಿ ಜತೆಗೆ ಈ ಬಗ್ಗೆ ಚರ್ಚಿಸುತ್ತೇನೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಹೇಳಿದರು.

ವಾರಾಹಿ ನೀರು ಒದಗಿಸುವಂತೆ ಆಗ್ರಹಿಸಿ ವಾರಾಹಿ ಕಚೇರಿ ಎದುರು ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆಯ ಸ್ಥಳಕ್ಕೆ ರವಿವಾರ ಆಗಮಿಸಿದ ಅವರು ಸಂತ್ರಸ್ತರು ಹಾಗೂ ರೈತ ಸಂಘಟನೆಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಶಾಸಕರಾದ ಕೆ.ಗೋಪಾಲ ಪೂಜಾರಿ, ಕೆ.ಪ್ರತಾಪಚಂದ್ರ ಶೆಟ್ಟಿ, ರೈತ ಸಂಘದ ಮುಖಂಡರಾದ ವಾಸುದೇವ ಯಡಿಯಾಳ ಮೊದಲಾದವರು ಉಪಸ್ಥಿತರಿದ್ದರು. 

ಸತ್ಯಾಗ್ರಹದ 4ನೇ ದಿನದ ಹೋರಾಟದಲ್ಲಿ ಭಾನುವಾರ ಬೆಳಗ್ಗೆ ಬೆಳ್ವೆ ವಲಯದ ನೂರಾರು ರೈತರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಹೋರಾಟವನ್ನು ಬೆಂಬಲಿಸಿದರು. ನ್ಯಾಯವಾದಿ ಸದಾನಂದ ಶೆಟ್ಟಿ, ಎ.ಬಿ.ಶೆಟ್ಟಿ, ಸತೀಶ್ ಕಿಣಿ, ವಾರಾಹಿ ಸಂತ್ರಸ್ತ ಗಣಪಯ್ಯ ಚಡಗ, ಪ್ರಗತಿಪರ ಕಷಿಕ ಉಮೇಶ್ ಕಿಣಿ ಮುಂತಾದವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com