ಜ. 18: ಪಲ್ಸ್‌ ಪೋಲಿಯೋ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಜ. 18 ರಂದು ನಡೆಯುವ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ ಒಟ್ಟು 88,248 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್‌ ಆರ್‌. ಹೇಳಿದ್ದಾರೆ.
     ಇದಕ್ಕಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಒಟ್ಟು 650 ಲಸಿಕಾ ಕೇಂದ್ರಗಳನ್ನು ಮತ್ತು 11 ಮೊಬೈಲ್‌ ಟೀಮ್‌ ಮತ್ತು 26 ಟ್ರಾನ್ಸಿಟ್‌ ಬೂತ್‌ ತೆರೆಯಲಾಗುವುದು, 2730 ಸ್ವಯಂ ಸೇವಕರು ಮತ್ತು 128 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬಂದಿ ಕಾರ್ಯ ನಿರ್ವಹಿಸಲಿದ್ದಾರೆ.
      ಸಾರ್ವಜನಿಕರು, ವಲಸೆ ಕಾರ್ಮಿಕರು ಮತ್ತು ಕೊಳಚೆ ನಿವಾಸಿಗಳು ತಮ್ಮ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ಹಾಕಿಸುವಂತೆ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಜ. 19 ಮತ್ತು 20 ರಂದು ಹಾಗೂ ನಗರ ಪ್ರದೇಶದಲ್ಲಿ ಜ.19 ರಿಂದ 21 ರ ವರೆಗೆ ಸ್ವಯಂಸೇವಕರು ಮನೆ ಮನೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com