ಗಂಗೊಳ್ಳಿ ಖಾರ್ವಿಕೇರಿ ಮಾರಿ ಜಾತ್ರೆ ಸಂಭ್ರಮ

ಗಂಗೊಳ್ಳಿ: ಖಾರ್ವಿ ಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಮಾರಿ ಜಾತ್ರೆಯು ವಿಜೃಂಭಣೆಯಿಂದ ನಡೆಯಿತು.

ಮಾರಿ ಜಾತ್ರೆಯ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳು, ಹರಕೆ, ಮಡಿಲು ತುಂಬುವ ಸೇವೆ, ಬ್ರಹ್ಮಕಲಶಾಭಿಷೇಕ, ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರಗಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಊರಿನ ಹಾಗೂ ಪರ ಊರಿನ ಅಸಂಖ್ಯ ಭಕ್ತಾದಿಗಳು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

ಮುಂಜಾಗ್ರತಾ ಕ್ರಮವಾಗಿ ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ ಹಾಗೂ ಬೆ„ಂದೂರು ಪೊಲೀಸ್‌ ವೃತ್ತ ನಿರೀಕ್ಷಕ ಸುದರ್ಶನ್‌ ಮಾರ್ಗದರ್ಶನದಂತೆ ಗಂಗೊಳ್ಳಿ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಸುಬ್ಬಣ್ಣ ನೇತƒತ್ವದಲ್ಲಿ ಬಿಗು ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com