ಕಾನೂನು ಸಾಕ್ಷರತೆ ಕಾರ್ಯಕ್ರಮಕ್ಕೆ ಚಾಲನೆ

ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ (ರಿ) ಕುಂದಾಪುರ  ಅಭಿಯೋಗ  ಇಲಾಖೆ, ಪೊಲೀಸ್‌ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ  ಇಲಾಖೆ, ತಾ.ಪಂ. ಕುಂದಾಪುರ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಮತ್ತು ಮಹಿಳಾ ಹಾಲು ಉತಾ#ದಕರ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ  ಕುಂದಾಪುರ ತಾಲೂಕಿನ ವಿವಿಧ ಸ್ಥಳಗಳಲ್ಲಿ ಫೆ.6ರಿಂದ 8ರ ತನಕ  ನಡೆಯುವ ಕಾನೂನು ಸಾಕ್ಷರತಾ ರಥದ ಮೂಲಕ ಕಾನೂನು ಸಾಕ್ಷರತೆ ಮತ್ತು ಲೋಕ ಅದಾಲತ್‌  ಕಾರ್ಯಕ್ರಮಕ್ಕೆ  ಹಸಿರು ನೀಶಾನೆ ತೋರಿಸುವ ಮೂಲಕ ಚಾಲನೆ ನೀಡಲಾಯಿತು.
      ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಧೀಶ ರಾಜಶೇಖರ ಪಾಟೀಲ  ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗ್ರಾಮೀಣ ಭಾಗಗಳಲ್ಲಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿ ಕೊಡುವುದು ಮತ್ತು ಜನರಿಗೆ ಕಾನೂನು ಮಾಹಿತಿ  ಒದಗಿಸುವುದು ಕಾನೂನು ಸಾಕ್ಷರತಾ ಕಾರ್ಯಕ್ರಮದ ಉದ್ಧೇಶವಾಗಿದೆ.  ಫೆ.6ರಿಂದ 8ರ ವರೆಗೆ ತಾಲೂಕಿನ ವಿವಿಧೆಡೆಗಳಲ್ಲಿ ಸಂಚರಿಸಲಿರುವ ಈ ರಥ ಗ್ರಾಮೀಣ ಭಾಗದಲ್ಲಿ ಇಡೀ ದಿನ ತಿÃರುಗಾಡಲಿದ್ದು, ಆಯ್ದ ಜಾಗಗಳಲ್ಲಿ ಜನರನ್ನು ಒಟ್ಟುಗೂಡಿಸಿ ಮಾಹಿತಿ ನೀಡುವ ಕೆಲಸಗಳಾಗಲಿದೆ. ಪ್ರತೀ ದಿನ ಸಂಜೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ  ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಸುವರ್ಣ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎ.ಬಾಲಕೃಷ್ಣ  ಶೆಟ್ಟಿ,  ಸಹಾಯಕ ಅಭಿಯೋಜಕಿ ಈದಾ, ವಕೀಲರ ಸಂಘದ ಉಪಾಧ್ಯಕ್ಷ ಶ್ರೀಕಾಂತ ಅಡಿಗ, ಪ್ರಧಾನ ಕಾರ್ಯದರ್ಶಿ ಎಸ್‌.ಮುರಳೀಧರ ಶೆಟ್ಟಿ, ಕುಂದಾಪುರ ಉಪವಿಭಾಗದ ಪೊಲೀಸ್‌  ಉಪಾಧ್ಯಕ್ಷ  ಮಂಜುನಾಥ ಶೆಟ್ಟಿ,  ವಕೀಲರ ಸಂಘದ ಜೊತೆ ಕಾರ್ಯದರ್ಶಿ ಸಂದೇಶ ಶೆಟ್ಟಿ  ಉಪಸ್ಥಿತರಿದ್ದರು. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com