ಮಾ.4: ಉಡುಪಿ ಜಿಲ್ಲಾ 10ನೇ ಸಾಹಿತ್ಯ ಸಮ್ಮೇಳನ

ಕೋಟ: ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ನಡೆಯುತ್ತಿರುವ 10ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ತಯಾರಿಗಳು ನಡೆಯುತ್ತಿವೆ.
      ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಾ.4 ಮತ್ತು 5ರಂದು ಸಾಲಿಗ್ರಾಮ ಗುರುನರಸಿಂಹ ಬಯಲು ರಂಗಮಂಟಪದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 'ನುಡಿಹಬ್ಬ -2015' ಜರುಗಲಿದೆ. 10ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಸಾಹಿತ್ಯ ಪರಿಷತ್ತಿನ ರಾಜಾಧ್ಯಕ್ಷ ಪುಂಡಲೀಕ ಹಾಲಂಬಿ ವಹಿಸಲಿದ್ದಾರೆ. ಸಮ್ಮೇಳನದ ವಿಶೇಷ ಆಕರ್ಷಣೆಯಾಗಿ ಮಾ.4ರಂದು ಬೆಳಿಗ್ಗೆ 9ಗಂಟೆಗೆ ಉದ್ಘಾಟನಾ ಮೆರವಣಿಗೆ ನಡೆಯಲಿದೆ ಎಂದರು.
    ಈ ಸಂದರ್ಭದಲ್ಲಿ 14 ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದೆ. ಆರಾಧನಾ ಕಲೆಯಾದ ಹೌಂದ್ರಾಯನ ವಾಲ್ಗೊ , ಕುಡುಬಿ ಜನಾಂಗದ ಹೋಳಿಹಬ್ಬದ ಕುರಿತು ಸಂವಾದ ಮತ್ತು ಪ್ರಾತ್ಯಕ್ಷತೆ ನಡೆಯಲಿದೆ. ಸಮ್ಮೇಳನದಲ್ಲಿ ಕನ್ನಡ ಪರ ಸೇವೆ ನೀಡಿದ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವುದರ ಜತೆಗೆ ಶತಮಾನೋತ್ಸವ ಆಚರಿಸಿಕೊಂಡ ಕನ್ನಡ ಶಾಲೆಗಳನ್ನು ಗುರುತಿಸಲಾಗುತ್ತಿದೆ.
     ಕಾರ್ಯಕ್ರಮಕ್ಕೆ ಆಗಮಿಸುವ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ, ಅಧಿಕಾರಿಗಳಿಗೆ ಹಾಗೂ ಶಿಕ್ಷಕೇತರರಿಗೆ ಅನ್ಯಕಾರ‌್ಯ ನಿಮಿತ್ತ ಓಓಡಿ ಸೌಲಭ್ಯ ಕಲ್ಪಿಸಲಾಗಿದೆ ಎಂದು  ಪತ್ರಿಕಾಗೋಷ್ಠಿಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಉಪೇಂದ್ರ ಸೋಮಯಾಜಿ, ಉಡುಪಿ ಜಿಲ್ಲಾ ಕಸಾಪದ ಕಾರ್ಯದರ್ಶಿ ರಂಗಪ್ಪಯ್ಯ ಹೊಳ್ಳ, ನಾರಾಯಣ ಮಡಿ ಮುಂತಾದವರು ಉಪಸ್ಥಿತರಿದ್ದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com