ಮಾ.7: ಭಂಡಾರ್ಕಾರ್ಸ್ ಕಾಲೇಜಿನ ವಾರ್ಷಿಕೋತ್ಸವ, ಹೊನ್ನಭಂಡಾರ ಲೋಕಾರ್ಪಣೆ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ, ಪ್ರಾಕ್ತನ ವಿದ್ಯಾರ್ಥಿ ಸಮಾವೇಶ ಹಾಗೂ ಹೊನ್ನ ಭಂಡಾರ ಕೃತಿ ಲೋಕಾರ್ಪಣೆ ಸಮಾರಂಭ ಮಾರ್ಚ್ 7ರಂದು ನಡೆಯಲಿದೆ.

ಕಾಲೇಜಿನ ಮಾಧವ ಮಂಟಪದಲ್ಲಿ ಬೆಳಿಗ್ಗೆ 11ಕ್ಕೆ ಜರುಗುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಆರ್. ಕೆ. ಶೆಟ್ಟಿ ಭಾಗವಹಿಸುವರು.
    ಕಾಲೇಜಿನ ಕೋಯಾಕುಟ್ಟಿ ಸಭಾಂಗಣದಲ್ಲಿ ಅಪರಾಹ್ನ 4ಗಂಟೆಗೆ ಪ್ರಾಕ್ತನ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ. ಸಂಜೆ 6 ಗಂಟೆಗೆ ಕಾಲೇಜಿನ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಹೊರತಂದ ಸಂಚಿಕೆ 'ಹೊನ್ನ ಭಂಡಾರ' ವನ್ನು ಹಂಪಿ ವಿವಿ ಮಾಜಿ ಕುಲಪತಿ ಡಾ| ಬಿ. ಎ. ವಿವೇಕ ರೈ ಡಾ| ಹೆಚ್. ಶಾಂತಾರಾಮ್ ಬಯಲು ರಂಗಮಂಟಪದಲ್ಲಿ ಲೋಕಾರ್ಪಣೆಗೊಳಿಸುವರು. ಮುಖ್ಯ ಅತಿಥಿಗಳಾಗಿ ನಾಟಕಕಾರ ಡಾ| ಹೆಚ್. ಎಸ್. ಶಿವಪ್ರಕಾಶ್ ಉಪಸ್ಥಿತರಿದ್ದು, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಆಡಳಿತಾಧಿಕಾರಿ ಡಾ| ಎಚ್ ಶಾಂತಾರಾಮ್ ಅಧ್ಯಕ್ಷತೆ ವಹಿಸುವರು. 
ಬಳಿಕ 'ಮದುವೆ ಹೆಣ್ಣು' ನಾಟಕ ಪ್ರದರ್ಶನವಿದೆ
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com