ಗಂಗಾ ಕಲ್ಯಾಣ ಯೋಜನೆಯ ಪರಿಕರ ವಿತರಣೆ

ಬೈಂದೂರು: ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಇದರ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಯಡ್ತರೆ ಗ್ರಾಮ ಪಂಚಾಯತ್‌ ಸಭಾ ಭವನದಲ್ಲಿ ಸಾಮಾಗ್ರಿಗಳನ್ನು ವಿತರಿಸಿದರು 

      ಈ ಸಂದರ್ಭ ಉಡುಪಿ ಜಿಲ್ಲಾ ಪಂಚಾಯತ್‌ ಶಿಕ್ಷಣ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಜಿಲ್ಲಾ ಪಂಚಾಯತ್‌ ಸದಸ್ಯ ಸುಪ್ರೀತಾ ದೀಪಕ್‌ ಕುಮಾರ್‌ ಶೆಟ್ಟಿ, ತಾಲೂಕು  ಪಂಚಾಯತ್‌ ಸದಸ್ಯ ರಾಜು ಪೂಜಾರಿ, ಯಡ್ತರೆ ಗ್ರಾ.ಪಂ. ಅಧ್ಯಕ್ಷ ನಾಗರಾಜ ಶೆಟ್ಟಿ, ಉಪಾಧ್ಯಕ್ಷೆ ಕಲಾವತಿ ಗಾಣಿಗ ಉಪಸ್ಥಿತರಿದ್ದರು. ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ ಸ್ವಾಗತಿಸಿ, ಕಿಶೋರ ಪುತ್ರನ್‌ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com