ಹರೆಗೋಡು ಮಾರಿಕಾಂಬಾ ದೈವಸ್ಥಾನ: ಧಾರ್ಮಿಕ ಸಭೆ, ಸಮ್ಮಾನ

ಕಟ್‌ಬೇಲ್ತೂರು: ಗ್ರಾಮದ ಹರೆಗೋಡು-ಕೊತ್ತಾಡಿ ಶ್ರೀ ಮಾರಿಕಾಂಬಾ ದೈವಸ್ಥಾನ ವಾರ್ಷಿಕ ಪೂಜಾ ಮಹೋತ್ಸವ ಮತ್ತು ಮಾರಿಕಾಂಬಾ ಯುವ ಸಮಿತಿಯ ೮ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ಜರಗಿತು.
  ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಭಟ್ ಹರೆಗೋಡು ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಸಚ್ಚಿದಾನಂದ ಚಾತ್ರ ಅವರು ಸಾಧಕರನ್ನು ಸಮ್ಮಾನಿಸಿದರು. ದೈವಸ್ಥಾನದ ಅಧ್ಯಕ್ಷ ನರಸಿಂಹ ದೇವಾಡಿಗ, ಯುವ ಸಮಿತಿ ಅಧ್ಯಕ್ಷ ಸುಧಾಕರ ಪೂಜಾರಿ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು.


  ಯಕ್ಷಗಾನ ಕಲಾವಿದ ಸೌಡ ಗೋಪಾಲ ನಾಯ್ಕ ಮತ್ತು ೨೦೧೨ನೇ ಸಾಲಿನ ರಾಜೇಶ್ ಶಿಬಾಜೆ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. 
  ಸಮಿತಿಯ ಕಲಾಶ್ರೀ ರಾಘವೇಂದ್ರ ಆಚಾರ್ಯ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಕಾಂತ್ ಆಚಾರ್ಯ ಹರೆಗೋಡು ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಧಾರ್ಮಿಕ ಸಭೆಯ ಬಳಿಕ ಕಮಲಶಿಲೆ ಮೇಳದವರಿಂದ ಕಮಲಶಿಲೆ ಕ್ಷೇತ್ರ ಮಹಾತ್ಮೆ- ಶ್ರೀನಿವಾಸ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com