ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಾಕೋಬ್‌ ಡಿಸೋಜ ಅಧಿಕಾರ ಸ್ವೀಕಾರ

ಕುಂದಾಪುರ:  ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಜಾಕೋಬ್‌ ಡಿಸೋಜ ಅವರ ಅಧಿಕಾರ ಸ್ವೀಕಾರ ಸಮಾರಂಭ ಇಲ್ಲಿನ ಪುರಸಭಾ ಸಭಾಂಗಣದಲ್ಲಿ ಜರುಗಿತು.
       ಅಧಿಕಾರ ಸ್ವೀಕರಿಸಿ ಮಾತನಾಡಿದ ಜಾಕೋಬ್ ಡಿಸೋಜ, ಕುಂದಾಪುರ ನಗರದ ಅಭಿವೃದ್ಧಿಯ ಬಗೆಗೆ ಮುಂದಿನ ದಿನಗಳಲ್ಲಿ ಮಾದರಿ ಯೋಜನೆ ರೂಪಿಸುವುದರ ಮೂಲಕ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಲು ಪ್ರಯತ್ನಿಸುವುದಾಗಿ ಹೇಳಿದರು. 
      ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಾಣಿ ಗೋಪಾಲ್ ಮಾತನಾಡಿ ವ್ಯವಸ್ಥಿತ ಹಾಗೂ ಕಾನೂನು ಬದ್ಧವಾಗಿ ಪ್ರಾಧಿಕಾರವನ್ನು ಮುನ್ನಡೆಸಲು ಮುಕ್ತ ಅವಕಾಶವನ್ನು ಮಾಡಿಕೊಡಿ ಎಂದರು.
        ಪುರಸಭಾ ಅಧ್ಯಕ್ಷೆ ಕಲಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಿರಿಯಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 
ಜಾಕೋಬ್ ಡಿಸೋಜ ಅವರನ್ನು ಪುರಸಭಾ ಸದಸ್ಯರು, ಅಧಿಕಾರಿ ವರ್ಗ ಹಾಗೂ ಅವರ  ಅಭಿಮಾನಿಗಳು ಶುಭಕೋರಿದರು.










ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com