ಸಂಭ್ರಮದಿ ಜರುಗಿದ ಕೊಲ್ಲೂರು ರಥೋತ್ಸವ

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ವಾರ್ಷಿಕ ಮನ್ಮಹಾರಥೋತ್ಸವ ವಿಜ್ರಂಭಣೆಯಿಂದ ಜರುಗಿತು. ಸಾವಿರಾರು ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ರಥೋತ್ಸವದ ಪೂರ್ವಭಾವಿಯಾಗಿ ಒಂದು ವಾರಗಳ ಕಾಲ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿತ್ತು. ಪ್ರತಿ ದಿನ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತಿದ್ದವು. 
      ರಥೋತ್ಸವದಲ್ಲಿ ಬೈಂದೂರು ಶಾಸಕ ಗೋಪಾಲ ಪೂಜಾರಿ, ತಾ.ಪಂ. ಸದಸ್ಯ ರಾಜು ಪೂಜಾರಿ, ಕೊಲ್ಲೂರಿನ ಆಡಳಿತ ಮಂಡಳಿಯ ಸರ್ವಸದಸ್ಯರು ಹಾಗೂ ಇನ್ನಿತರ ಪ್ರಮುಖರು ಪಾಲ್ಗೊಂಡಿದ್ದರು. ಕುಂದಾಪುರ ಡಿ.ವೈ.ಎಸ್.ಪಿ ಮಂಜುನಾಥ ಶೆಟ್ಟಿ ನೇತೃತ್ವದಲ್ಲಿ ಬಂದೋವಸ್ತ ಏರ್ಪಡಿಸಲಾಗಿತ್ತು. 
















ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com