ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ರಥೋತ್ಸವ ಮಾ. 14 ರಂದು ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಕೇರಳ, ತಮಿಳುನಾಡಿನಿಂದ ಆಗಮಿಸುವ ಭಕ್ತರಿಗೆ ರಥೋತ್ಸವ ಸಂದರ್ಭ ಶ್ರೀ ದೇವಿಯ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ವಿಶೇಷ ಬಂದೋಬಸ್ತ್ ಏರ್ಪಡಿಸಲಾಗಿದೆ. ವಾಹನ ನಿಲುಗಡೆ ಹಾಗೂ ಸಂಚಾರಕ್ಕೆ ಕಟ್ಟುನಿಟ್ಟಾದ ಕ್ರಮಕೈಗೊಳ್ಳಲಾಗಿದ್ದು, ವಸತಿ ಸೌಕರ್ಯಗಳಿಂದ ಯಾವುದೇ ಭಕ್ತರು ವಂಚಿತರಾಗದಂತೆ ನೋಡಿಕೊಳ್ಳಲಾಗುವುದು ಎಂದು ದೇವಳದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಧಿಕಾರಿ ವಿ. ಪ್ರಸನ್ನ ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment