ಮಾ.26: ಕೋಣಿ ಗ್ರಾ.ಪಂ.ಗೆ ಮುತ್ತಿಗೆ, ಹೋರಾಟ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ, ಮನೆ ನಿವೇಶನ ರಹಿತರ ಹೋರಾಟ ಸಮಿತಿ ಕೋಣಿ, ಇವರ ನೇತೃತ್ವದಲ್ಲಿ - ಕೋಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣಿ, ಕಂದಾವರ ಗ್ರಾಮಗಳಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಒಂದೇ ಮನೆಯ ಸೂರಿನಡಿಯಲ್ಲಿ 2-3 ಕುಟುಂಬ ಅನಿವಾರ‍್ಯವಾಗಿ ವಾಸವಾಗಿರುವ ದುಸ್ಥಿತಿ ಹಾಗೂ ಸ್ವಂತ ಮನೆ ಭೂಮಿ ಇಲ್ಲದ ನಿವೇಶನ ರಹಿತರು ಮನೆ ನಿವೇಶನ ಹಕ್ಕು ಪತ್ರ ಮಂಜೂರು ಮಾಡಲು ಒತ್ತಾಯಿಸಿ ಸಲ್ಲಿಸಿದ ಅರ್ಜಿಗಳನ್ನು ಕಳೆದ 2 ವರ್ಷಗಳಿಂದಲೂ ಗ್ರಾಮ ಪಂಚಾಯತ್ ಆಡಳಿತ ಯಾವುದೇ ಕ್ರಮ ವಹಿಸದೇ ಇರುವುದನ್ನು ಖಂಡಿಸಿ, ಹಾಗೂ ಕೋಣಿ ಕಂದಾವರ ಗ್ರಾಮಗಳಲ್ಲಿ ಲಭ್ಯವಿರುವ ಸರಕಾರಿ ಜಾಗವನ್ನು ನಿವೇಶನ ರಹಿತರಿಗೆ ಮಂಜೂರು ಮಾಡುವ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆದೇಶ ನೀಡಿದರೂ ಕೂಡ ಕೋಣಿ ಗ್ರಾಮ ಪಂಚಾಯತ್ ಈ ಬಗ್ಗೆ ಯಾವುದೇ ರೀತಿಯಲ್ಲಿ ಸಕಾರಾತ್ಮಕರಾಗಿ ಸ್ಪಂದಿಸದ ಕಾರಣ ಮಾರ್ಚ್ 26ರ ಬೆಳಿಗ್ಗೆ 11 ಗಂಟೆಗೆ ಕೋಣಿ ಗ್ರಾಮ ಪಂಚಾಯತ್ ಕಛೇರಿಯ ಎದುರು ನಿವೇಶನ ರಹಿತ ಅರ್ಜಿದಾರರು ಬೃಹತ್ ಪ್ರತಿಭಟನಾ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಈ ಮೂಲಕ ಗ್ರಾಮ ಪಂಚಾಯತ್ ಕಛೇರಿ ಮುತ್ತಿಗೆ ಹೋರಾಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
      ಕೋಣಿ ಗ್ರಾಮದ ಬಡ ನಿವೇಶನ ರಹಿತ ಅರ್ಜಿದಾರರೆಲ್ಲರೂ ಕೋಣಿ ಗ್ರಾಮ ಪಂಚಾಯತ್ ಕಛೇರಿ ಮುತ್ತಿಗೆ ಹೋರಾಟ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಕಾರ್ಯದರ್ಶಿ ವೆಂಕಟೇಶ ಕೋಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com