ವಿಪತ್ತು ನಿರ್ವಹಣೆಯಲ್ಲಿ ಯುವಜನತೆ ಆಸಕ್ತಿ ತೋರಬೇಕು: ಎಸ್ಪಿ ಅಣ್ಣಮಲೈ

ಕುಂದಾಪುರ: ಮುಂದುವರಿದ ದೇಶಗಳಲ್ಲಿ ಅವಘಟಗಳು ನಿರಂತರವಾಗಿ ಘಟಿಸುತ್ತಲೇ ಇರುತ್ತದೆ. ಆದರೆ ಕೆಲವೇ ದಿನಗಳಲ್ಲಿ ಅದರಿಂದ ಹೊರಬಂದು ಆ ದೇಶ ಸಹಜ ಸ್ಥಿತಿಗೆ ಮರಳುತ್ತದೆ. ಆದರೆ ಭಾರತ ಮಟ್ಟಿಗೆ ಇದು ವ್ಯತಿರಿಕ್ತವಾಗಿದೆ  ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು.

ಅವರು ಇಲ್ಲಿನ ಕೋಯಾಕುಟ್ಟಿ ಸಭಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳ, ಅಗ್ನಿಶಾಮಕ ದಳ, ತುರ್ತು ಸೇವೆಗಳು, ಲಯನ್ಸ್ ಕ್ಲಬ್ ಕುಂದಾಪುರ ಹಾಗೂ ಭಂಡಾರ್‌ಕಾರ್ಸ್‌ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

ದೇಶದ ಯುವಜನತೆ ವಿಪತ್ತು ನಿರ್ವಹಣೆ ವಿಷಯದಲ್ಲಿ ಆಸಕ್ತಿ ತೋರುತ್ತಿಲ್ಲ. ಜಿಗುಪ್ಸೆಯನ್ನು ದೂರಮಾಡಿ ಯುವಜನತೆ  ದೇಶದ ರಕ್ಷಣೆಯಲ್ಲಿ ಕೈಜೋಡಿಸಬೇಕು. ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಸ್ವಯಂಸ್ಫೂರ್ತಿಯಿಂದ ಜನರಿಗೆ ನೆರವಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. 

ಗೃಹರಕ್ಷಕ ದಳ ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಜಯಕರ ಶೆಟ್ಟಿ ಇಂದ್ರಾಳಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಪ್ರಕಾಶ್ ಬೆಟ್ಟಿನ್, ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ಬಾಲಕೃಷ್ಣ ಶೆಟ್ಟಿ, ಎಂಜಿನಿಯರ್ ರಮಾನಂದ ಗಾಣಿಗ, ಭಂಡಾರ್‌ಕಾರ್ಸ್‌ ಕಾಲೇಜಿನ ಪ್ರಿನ್ಸಿಪಾಲ್ ಡಾ.ಎನ್.ಪಿ. ನಾರಾಯಣ ಶೆಟ್ಟಿ, ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು. ಗೃಹರಕ್ಷಕ ದಳ ಡೆಪ್ಯುಟಿ ಕಮಾಂಡರ್ ರಮೇಶ್ ಸ್ವಾಗತಿಸಿದರು. ಸಾಯಿನಾಥ್ ಕಾರ್ಯಕ್ರಮ ನಿರ್ವಹಿಸಿದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com