ನಾವುಂದ ಕಾಲೇಜಿನಲ್ಲಿ ಸಾಪ್ಟ್ ಸ್ಕಿಲ್‌ ತರಬೇತಿ

ನಾವುಂದ: ನಾವುಂದ ರಿಚರ್ಡ್‌ ಅಲ್ಮೇಡಾ ಮೆಮೋರಿಯಲ್‌ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎಂ. ತರಗತಿಯ ವಿದ್ಯಾರ್ಥಿ ಗಳಿಗೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕೆರಿಯರ್‌ ಗೈಡೆನ್ಸ್‌ ವಿಭಾಗದ ಮುಖ್ಯಸ್ಥ ಪ್ರೊ| ಚಂದನ್‌ ರಾವ್‌ ಅವರು ಸಾಪ್ಟ್ ಸ್ಕಿಲ್‌ ತರಬೇತಿಯಲ್ಲಿ ವಿಶೇಷವಾಗಿ ಇಂದಿನ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಿದ್ಧಮಾಡಿಕೊಳ್ಳುವುದರ ಬಗ್ಗೆ ಉಪನ್ಯಾಸ ನೀಡಿದರು.
    
ಈ ತರಬೇತಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಸಂಚಾಲಕ ಸಿಲ್ವೆಸ್ಟರ್‌ ಡಿ'ಅಲ್ಮೇಡಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಎಸ್‌. ನಾರಾಯಣ್‌ ರಾವ್‌ ತರಬೇತಿಯ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
   ವಿದ್ಯಾರ್ಥಿನಿ ಶೈಲಿನ್‌ ಕಾರ್ಯಕ್ರಮ ನಿರ್ವಹಿಸಿದರು  ವಿದ್ಯಾರ್ಥಿ ನಾಗೇಂದ್ರ ಸ್ವಾಗತಿಸಿದರು. ವಿದ್ಯಾರ್ಥಿ  ಪ್ರತಾಪಚಂದ್ರ ಶೆಟ್ಟಿ ಅವರು ತರಬೇತುದಾರರ ಪರಿಚಯವನ್ನು ನೀಡಿದರು.  ಸಂದೇಶ ಅವರು ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com