ಆಶಾ ಕಾರ್ಯಕರ್ತರಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ಇಲ್ಲಿನ ತಹಸೀಲ್ದಾರರ ಕಛೇರಿ ಎದುರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ (ಸಿಐಟಿಯು) ಕುಂದಾಪುರ ತಾಲೂಕು  ಸಮಿತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.

   ರಾಜ್ಯವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು ಕುಂದಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕುಂದಾಪುರ ತಾಲೂಕು ಸಿಐಟಿಯುನ ಅಧ್ಯಕ್ಷ ನರಸಿಂಹ ಎಚ್. ಮಾತನಾಡಿ ರಾಜ್ಯ ಸರ್ಕಾರ ಮಂಡಿಸಿದ 2015-16ನೇ ಸಾಲಿನ ಬಜೆಟ್ ನಲ್ಲಿ ಕಾರ್ಯಕರ್ತರ ಯಾವುದೇ ಬೇಡಿಕೆಗಳನ್ನು ಈಡೇರಿಸದೇ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದರು.
  ಆಶಾ ಕಾರ್ಯಕರ್ತರ ಸಂಘದ ಕುಂದಾಪುರ ತಾಲೂಕು ಸಮಿತಿ ಅಧ್ಯಕ್ಷೆ ವಸಂತಿ ಶೆಟ್ಟಿ ಮಾತನಾಡಿ ಆಶಾ ಕಾರ್ಯಕರ್ತರನ್ನು ಆರೋಗ್ಯ ಕಾರ್ಯಕರ್ತರೆಂದು ಪರಿಗಣಿಸಿ ಕನಿಷ್ಠ 15000 ಮಾಸಿಕ ವೇತನ ನಿಗದಿಪಡಿ, ಸಾಮಾಜಿಕ ಭದ್ರತೆಯಡಿಯಲ್ಲಿ ಪಿಂಚಣಿ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಬೇಕು. ಕಾರ್ಯಕರ್ತೆಯರಿಗೆ ಸಮವಸ್ತ್ರ, ಗುರುತಿನ ಚೀಟಿ, ಬಸ್ ಪಾಸ್ ಹಾಗೂ ಬಿಪಿಎಲ್ ಕಾರ್ಡುದಾರಿಗಿರುವ ಎಲ್ಲಾ ಸೌಲಭ್ಯಗಳನ್ನು ಓದಗಿಸಬೇಕು ಎಂದು ಆಗ್ರಹಿಸಿದರು.
    ಬಳಿಕ ಕುಂದಾಪುರ ತಾಹಿಸೀಲ್ದಾರರಾದ ಗಾಯತ್ರಿ ನಾಯಕ್ ಅವರ ಮೂಲಕ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
    ಸಮಿತಿಯ ಕಾರ್ಯದರ್ಶಿ ಶೀಲಾವತಿ, ಕಟ್ಟಡ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ ಕೋಣಿ, ಎಸ್.ಎಫ್.ಐ ಮುಖಂಡ ಶ್ರೀಕಾಂತ ಹೆಮ್ಮಾಡಿ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com