ಕುಂದಾಪುರ: ರಾಜ್ಯ ಕಂಡ ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿಯ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಶೀಘ್ರವೇ ಸಿಬಿಐ ಗೆ ಒಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಬಿ.ಬಿ.ಹೆಗ್ಡೆ ಕಾಲೇಜಿನ ನೂರಾರು ವಿದ್ಯಾರ್ಥಿಗಳಿಂದ ತಾಲೂಕು ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿತು.
ಬಿ.ಬಿ. ಹೆಗ್ಡೆ ಕಾಲೇಜಿನಿಂದ ಹೊಸಬಸ್ ನಿಲ್ದಾಣದ ವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿಬಂದ ಬಳಿಕ ಕುಂದಾಪುರ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ನೀಡಿದರು.
ಪ್ರಕರಣವನ್ನು ಕೂಡಲೇ ಸಿಬಿಐ ತನಿಕೆಗೆ ಒಪ್ಪಿಸಿ ನ್ಯಾಯ ದೊರಕಿಸಿಕೊಂಡುವುದಲ್ಲದೇ ನಿಷ್ಠಾವಂತ ಅಧಿಕಾರಿಗಳಿಗೆ ನೈತಿಕ ಸ್ಥೈರ್ಯವನ್ನು ತುಂಬಬೇಕಿದೆ. ಐಜಿಪಿ ಪ್ರಣಬ್ ಮೊಹಾಂತಿಯನ್ನು ವರ್ಗಾವಣಿ ಮಾಡಿದ ಬಗೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆ ನೇತೃತ್ವವನ್ನು ಎಬಿವಿಪಿ ತಾಲೂಕು ಸಂಚಾಲ ಚೇತನಕುಮಾರ್, ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಆಶಿಕ್, ರಕ್ಷಿತ್, ನವೀನ್, ಸದಾನಂದ ಹಾಗೂ ಸುಶಾಂತ್ ವಹಿಸಿದ್ದರು. ಎಬಿವಿಪಿ ಮುಖಂಡರಾದ ವಿನಯಕುಮಾರ್, ಸುಬ್ರಹ್ಮಣ್ಯ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ್ ಕಾವೇರಿ, ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠ ಸಂಚಾಲಕ ಕಿಶೋರ್ಕುಮಾರ್, ಕುಂದಾಪುರ ತಾ.ಪಂ.ಅಧ್ಯಕ್ಷ ಭಾಸ್ಕರ ಬಿಲ್ಲವ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾರ್ಯದರ್ಶಿ ಮಹೇಶ್ ಪೂಜಾರಿ, ಬಿಜೆಪಿ ಮುಖಂಡರಾದ ರವೀಂದ್ರ ದೊಡ್ಮನೆ, ರಾಜೇಶ್ ಕಡ್ಗಿಮನೆ, ಸದಾನಂದ ಬೈಂದೂರು ಪಾಲ್ಗೊಂಡಿದ್ದರು. ಮೊದಲಾದವರು ಭಾಗವಹಿಸಿದ್ದರು.
0 comments:
Post a Comment