ಮಾ.7ಕ್ಕೆ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಉದ್ಘಾಟನೆ

ತಲ್ಲೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು, ಸುಮಾರು 350 ವರ್ಷಗಳ ಹಳೆಯ ಭಾರತೀಯ ಜನಪದ ಪರಂಪರೆಯನ್ನು ಹೊಂದಿರುವ ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಗೊಂಬೆಯಾಟ ಅಕಾಡೆಮಿ ಕಟ್ಟಡವು  ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ನ ಅಡಿಯಲ್ಲಿ ಗೊಂಬೆಯಾಟ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಲೆಎತ್ತಿ ನಿಂತಿದ್ದು ಲೋಕಾರ್ಪಣೆಗೆ ಸಿದ್ಧಗೊಂಡಿದೆ ಇದರ ಉದ್ಘಾಟನೆಯು  ಉಪ್ಪಿನಕುದ್ರುವಿನಲ್ಲಿ ಮಾರ್ಚ್ 7ರ ಬೆಳಿಗ್ಗೆ ನಡೆಯಲಿದೆ. ಬೆಂಗಳೂರಿನ ಸೆಂಚುರಿ ಬಿಲ್ಡರ್ಸ್ ನ ವ್ಯವಸ್ಥಾಪಕ ನಿರ್ದೇಶಕ ಡಾ| ಪಿ. ದಯಾನಂದ ಪೈ ಉದ್ಘಾಟಿಸಲಿದ್ದಾರೆ. 

   ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ದೀಪ ಬೆಳಗುವ ಮೂಲಕ ಉದ್ಘಾಟಿಸಲಿದ್ದು, ಸೆಂಚುರಿ ಬಿಲ್ಡರ್ಸ್ ನ ವ್ಯವಸ್ಥಾಪಕ ನಿರ್ದೇಶಕ ಡಾ| ಪಿ. ದಯಾನಂದ ಪೈ ಅಧ್ಯಕ್ಷತೆ ವಹಿಸಲಿದ್ದಾರೆ.
      ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಶಾಸಕ ಗೋಪಾಲ ಪೂಜಾರಿ, ವಿಧಾನಪರಿಷತ್ ಶಾಸಕ ಶ್ರೀನಿವಾಸ ಪೂಜಾರಿ, ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಉದ್ಯಮಿ ಆನಂದರಾಮ್ ಉಳ್ಳೂರು, ನಿವೃತ್ತ ಪ್ರಾಧ್ಯಾಪಕ ಡಾ| ಎಚ್. ವಿ. ನರಸಿಂಹಮೂರ್ತಿ, ಚಾರ್ಟೆಟ್ ಅಕೌಂಟೆಂಟ್ ಪಿ.ಪಿ. ಮಯ್ಯ, ಕುಂದಾಪುರ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟೀ ರಾಧಾಕೃಷ್ಣ ಶೆಣೈ, ತಲ್ಲೂರು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ ಕೊಠಾರಿ ಉಪಸ್ಥಿತರಿರುವರು.
     ಇದೇ ಸಂದರ್ಭದಲ್ಲಿ ಹೆಮ್ಮಾಡಿಗೆ ಯು. ವಾಮನ ಪೈ ಅವರಿಗೆ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರಧಾನ ಹಾಗೂ ವಿವಿಧ ಕ್ಷೇತ್ರದ ಸಾಧಕರಾದ ಜಯವಂತ ಪೈ ಕುಂದಾಪುರ, ಬಾಬುರಾಯ ಶೆಣೈ ಉಡುಪಿ, ಬಾಬು ಎನ್. ಪೂಜಾರಿ ಬೆಂಗಳೂರು, ಟಿ.ಎನ್. ಪ್ರಭು ತಲ್ಲೂರು, ಮಂಜುನಾಥ ಮೈಪಾಡಿ ಅವರಿಗೆ ಸನ್ಮಾನ ನಡೆಯಲಿದೆ. ಉಪ್ಪಿನಕುದ್ರು ಸರಕಾರಿ ಶಾಲೆಯಲ್ಲಿ ಏಳನೇ ತರಗತಿ ಹಾಗೂ ಎಸ್.ಎಸ್.ಎಲ್.ಸಿ. ಪ್ರಥಮ ಸ್ಥಾನಿಗಳಾದವರಿಗೆ ಬಹುಮಾನ ವಿತರಣೆ ಕೂಡ ನಡೆಯಲಿದೆ.
    ಮಧ್ಯಾಹ್ನ ಗೊಂಬೆಯಾಟದ ಕುರಿತು ವಿಶೇಷ ಉಪನ್ಯಾಸ ಜರುಗಲಿದ್ದು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ. ಎಲ್. ಸಾಮಗ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೃಷ್ಣಯ್ಯ ಉಡುಪಿ, ಜನಾರ್ಧನ ಮರವಂತೆ, ವಿ. ಜಿ. ಹೆಗ್ಡೆ ಉಪಸ್ಥಿತರಿರುವರು.
   ಸಂಜೆ ಸಮಾರೋಪ ಸಮಾರಂಭದೊಂದಿಗೆ ಸ್ಥಳೀಯ ಶಾಲಾ ಮಕ್ಕಳಿಂದ ನೃತ್ಯ ಉಡುಪಿ ಯಕ್ಷಗಾನ ಕೇಂದ್ರದಿಂದ ಯಕ್ಷಗಾನ ಪ್ರದರ್ಶನ ಜರುಗಲಿದೆ ಎಂದು ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com