ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾಳೆ: ಕೆ. ಕೆ. ಮಧ್ಯಸ್ಥ

ಕುಂದಾಪುರ: ಮಹಿಳೆಯರು ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಯಾವ ವಿಚಾರದಲ್ಲಿಯೂ ಪುರುಷರಿಗೆ ಕಡಿಮೆಯಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಯುವ ಉದ್ಯಮಿ ಕೆ. ಕಾರ್ತಿಕೇಯ ಮಧ್ಯಸ್ಥ ಹೇಳಿದರು. 
       ಅವರು ಕುಂದಾಪುರದ ಶ್ರೀ ಮೂಕಾಂಬಿಕಾ ಮಹಿಳಾ ಮಂಡಲಗಳ ಒಕ್ಕೂಟದ ಸಭಾಭವನದಲ್ಲಿ  ಶ್ರೀ ಮೂಕಾಂಬಿಕಾ ಮಹಿಳಾ ಮಂಡಲಗಳ ತಾಲೂಕು ಒಕ್ಕೂಟ, ಮಿಡ್ ಟೌನ್ ರೋಟರಿ ಕ್ಲಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ವಿಶ್ವ ಮಹಿಳಾ ದಿನಾಚರಣೆಯ ಸಭಾ ಕಾರ್ಯಕ್ರಮದವನ್ನು ಉದ್ಘಾಟಿಸಿ ಮಾತನಾಡಿದರು.
    ಪುರುಷಪ್ರಧಾನ ಸಮಾಜವೆಂಬುದನ್ನು ಮೀರಿ ತನ್ನ ಕಾರ್ಯವೈಖರಿಯಿಂದ ಸಮಾಜವನ್ನು ಸುಸ್ಥಿತಿಯಲ್ಲಿಡುವ ಕೆಲಸ ಮಹಿಳೆಯಿಂದಾಗುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ ಎಂದರು.
   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರ ತಾ.ಪಂ ಅಧ್ಯಕ್ಷ ಭಾಸ್ಕರ ಬಿಲ್ಲವ, ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಅಮರ್ ಪ್ರಸಾದ್ ಶೆಟ್ಟಿ, ರೋಟರಿ ಮಿಡ್ ಟೌನ್ ನ ಅಬ್ದುಲ್ ಬಶೀರ್, ರೋಟರಿ ಸಹಾಯಕ ರಾಜ್ಯಪಾಲ ಎಂ. ಗಣೇಶ್ ಶೆಟ್ಟಿ, ಮಾಜಿ ರೋಟರಿ ಸಹಾಯಕ ರಾಜ್ಯಪಾಲ ಸುಧಾಕರ ಶೆಟ್ಟಿ ಆವರ್ಸೆ, ಭಂಡಾರ್ಕಾರ್ಸ್ ಕಾಲೇಜಿನ ಉಪನ್ಯಾಸಕಿ ಡಾ| ಯಶವಂತಿ, ಉದ್ಯಮಿ ಸುಬ್ಬಣ್ಣ ಶೆಟ್ಟಿ, ತಾಲೂಕು ಮಹಿಳಾ ಒಕ್ಕೂಟದ ಗೌರವಾಧ್ಯಕ್ಷೆ ಹೇಮಾವತಿ ಎನ್. ಹೆಗ್ಡೆ ಉಪಸ್ಥಿತರಿದ್ದರು.
     ಸಮಾರಂಭದಲ್ಲಿ ಉಡುಪಿ ಜಿಲ್ಲಾ ನಿವೃತ್ತ ಆರೋಗ್ಯಾಧಿಕಾರಿ ಡಾ| ಯು. ವನಜಾಕ್ಷಿ, ಸಮಾಜ ಸೇವಕಿ ಹೆಚ್. ಪದ್ಮ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ರಾಧಾದಾಸ್ ಅತಿಥಿಗಳನ್ನು ಸ್ವಾಗತಿಸಿದರು.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com