ವಕೀಲರ ಸಂಘದಿಂದ ಮಹಿಳಾ ದಿನಾಚರಣೆ

ಕುಂದಾಪುರ: ವಿಶ್ವ ಮಹಿಳಾ ದಿನಾಚರಣೆ ಒಂದು ದಿನಕ್ಕಷ್ಟೇ ಸೀಮಿತವಾಗಿರದೇ ಪ್ರತಿದಿನವು ಮಹಿಳೆಯ ದಿನವಾಗಬೇಕು. ಪುರುಷನಷ್ಟೇ ಮಹಿಳೆ ಸಮರ್ಥಳಗಾಗಿದ್ದರೂ ಆಕೆ ಇಂದಿಗೂ ಹಕ್ಕುಗಳಿಂದ ವಂಚಿತಳಾಗಿ ದ್ದಾಳೆ ಎಂದು ಕುಂದಾಪುರ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ವಿಜೇತಾ ಪಿಂಕಿ ಡೇಸಾ ಹೇಳಿದರು. 

ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಕುಂದಾಪುರ ವಕೀಲರ ಸಂಘ, ಅಭಿಯೋಗ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ, ಸಮಗ್ರ ಶಿಶು ಅಭಿವದ್ಧಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ರಾಜ್ಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಭಂಡಾರಿ ಮಹಿಳೆ ಮತ್ತು ಕಾನೂನು ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿದರು. 

ತಾ.ಪಂ.ಅಧ್ಯಕ್ಷ ಭಾಸ್ಕರ ಬಿಲ್ಲವ, ಸಹಾಯಕ ಸರಕಾರಿ ಅಭಿಯೋಜಕಿ ಸುಮಂಗಲಾ ನಾಯ್ಕ್, ಶಿಶು ಅಭಿವದ್ಧಿ ಯೋಜನಾಧಿಕಾರಿ ಸದಾನಂದ ನಾಯ್ಕ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಉಪಸ್ಥಿತರಿದ್ದರು. ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶಿರಿಯಾರ ಮುರುಳೀಧರ ಶೆಟ್ಟಿ ಸ್ವಾಗತಿಸಿದರು. ನ್ಯಾಯವಾದಿ ಉಮೇಶ್ ಶೆಟ್ಟಿ ಶಾನ್ಕಟ್ಟು ಕಾರ್ಯಕ್ರಮ ನಿರ್ವಹಿಸಿದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com