ಅಟ್ರಾಸಿಟಿ ಕಾಯ್ದೆಯ ಅರಿವಿಗೆ ಕಾನೂನು ಮಾಹಿತಿ ಶಿಬಿರ


ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ, ಕುಂದಾಪುರದ ವಕೀಲರ ಸಂಘ, ಅಭಿಯೋಗ ಇಲಾಖೆ, ಕಂದಾಯ ಇಲಾಖೆ ಹಾಗೂ ಪೋಲಿಸ್ ಇಲಾಖೆಯ  ಸಂಯುಕ್ತಾಶ್ರಯದಲ್ಲಿ ಕಾನೂನು ಮಾಹಿತಿ ಶಿಬಿರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. 
     ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜಶೇಖರ ವೆಂಕನಗೌಡ ಪಾಟೀಲ್ ಶಿಬಿರವನ್ನು ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಎ.ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
     ಕುಂದಾಪುರ ತಹಸೀಲ್ದಾರಾದ ಗಾಯತ್ರಿ ನಾಯಕ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮುರುಳೀಧರ ನಾಯಕ್, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 
    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ವಕೀಲರಾದ ಟಿ. ಬಿ. ಶೆಟ್ಟಿ ಮಾತನಾಡಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com