ಕುಂದಾಪುರ: ಗೋಪಾಡಿ ಬೀಚ್ ರಸ್ತೆ ನಿವಾಸಿ ಗರ್ಭಿಣಿ ಇಂದಿರಾ ಮೊಗವೀರ ಅವರನ್ನು ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೀಜಾಡಿ ನಿವಾಸಿ ಪ್ರಶಾಂತ್ ಮೊಗವೀರ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ಮೊಗವೀರ ಮನೆಯಲ್ಲಿ ಒಬ್ಬಳೇ ಇರುವ ಸಂದರ್ಭವನ್ನು ನೋಡಿ ಬಂದ್ದಿ ಪ್ರಶಾಂತ ಮೊಗವೀರ ಆಕೆಯನ್ನು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ಆಕೆ ಬೊಬ್ಬೆ ಹೊಡೆದಿದ್ದರಿಂದ ಕಲ್ಲಿನಿಂದ ಚಚ್ಚಿ ಕೊಲೆ ಮಾಡಿ ಆಕೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡು ಹೋಗಿದ್ದಾನೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಈ ಹಿಂದೆ ಕಳವು ಪ್ರಕರಣದಲ್ಲಿ ಈತ ಜೈಲು ವಾಸವನ್ನೂ ಸಹ ಮಾಡಿದ್ದನು ಎಂದು ತಿಳಿದು ಬಂದಿದೆ.
ಮಹಿಳೆಯ ಶವವನ್ನು ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು. ಕುಂದಾಪುರದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment