ಜಡ್ಕಲ್: ಬಿಜೆಪಿ ಕಾರ್ಯಕರ್ತರ ಸಭೆ

ಕೊಲ್ಲೂರು: ಗ್ರಾಮ ಪಂಚಾಯತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆ ಜಡ್ಕಲ್ ನಲ್ಲಿ ಜರುಗಿತು. 

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬೈಂದೂರು ಬ್ಲಾಕ್ ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ, ಈ ಭಾರಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸುವುದು ಖಚಿತ. ಈ ಬಗ್ಗೆ ಸಂಶಯ ಬೇಡ. ಪಕ್ಷದ ಕಾರ್ಯಕರ್ತರುಗಳು ಒಗ್ಗಟ್ಟಿನಿಂದ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗುರುರಾಜ್ ಗಂಟಿಹೊಳೆ, ಬಿಜೆಪಿ ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ಜಡ್ಕಲ್ ಶಕ್ತಿ ಕೇಂದ್ರದ ಕಾರ್ಯಕರ್ತರುಗಳು ಹಾಜರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com