ಉಪ್ಪುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಬೈಂದೂರು: ಗ್ರಾಮ ಪಂಚಾಯತ್ ಚುನಾವಣೆಗೆ ಪೂರ್ವಭಾವಿಯಾಗಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆ ಉಪ್ಪುಂದದಲ್ಲಿ ಜರುಗಿತು.  
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಬ್ಲಾಕ್ ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ, ಈ ಭಾರಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸುವುದು ಖಚಿತ. ಈ ಬಗ್ಗೆ ಸಂಶಯ ಬೇಡ. ಪಕ್ಷದ ಕಾರ್ಯಕರ್ತರುಗಳು ಒಗ್ಗಟ್ಟಿನಿಂದ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಿಕ್ಷಣ ಮತ್ತ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ, ನವೀನ್ ಚಂದ್ರ ಉಪ್ಪುಂದ ಹಾಗೂ ಇನ್ನಿತರ ಮುಖಂಡರು ಹಾಜರಿದ್ದರು. ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗುರುರಾಜ್ ಗಂಟಿಹೊಳೆ ಸ್ವಾಗತಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com