ಮೇ.31: ನೇತ್ರ ತಪಾಸಣಾ ಶಿಬಿರ

ಮರವಂತೆ: ಉಡುಪಿಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಂಧತ್ವ ನಿವಾರಣಾ ವಿಭಾಗ ಮತ್ತು ಮರವಂತೆಯ ಸಾಧನಾ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಮೇ 31ರ ಬೆಳಗ್ಗೆ 9:30ರಿಂದ ಮಧ್ಯಾಹ್ನ 1:00 ಗಂಟೆಯ ವರೆಗೆ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯುವುದು. ಮರವಂತೆಯ ಸಾಧನಾ ಸಮುದಾಯ ಭವನದಲ್ಲಿ ನಡೆಯುವ ಈ ಶಿಬಿರದಲ್ಲಿ ಪರಿಣತ ವೈದ್ಯರು ಕಣ್ಣಿನ ಪೂರ್ಣ ತಪಾಸಣೆ ನಡೆಸುವರು. ಅಗತ್ಯವೆಂದು ಕಂಡುಬಂದವರನ್ನು ಆಸ್ಪತ್ರೆಯ ವಾಹನದಲ್ಲಿ ಉಡುಪಿಗೆ ಕರೆದೊಯ್ದು ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಿ, ಮರುದಿನ ಅವರನ್ನು ಮನೆಗೆ ತಲಪಿಸಲಾಗುವುದು. ಕನ್ನಡಕ ಅಗತ್ಯ ಇರುವವರಿಗೆ ರಿಯಾಯಿತಿ ದರದಲ್ಲಿ ಅದನ್ನು ಒದಗಿಸಲಾಗುವುದು. ಕಣ್ಣಿನ ಸಮಸ್ಯೆ ಇರುವವರು ಶಿಬಿರದ ಸದುಪಯೋಗ ಪಡೆಯಬೇಕೆಂದು ಸಾಧನಾ ವಿನಂತಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com