ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವ: ಮೂವರು ಯತಿಶ್ರೇಷ್ಠರ ಸಮಾಗಮ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಅಪೂರ್ವ ವಿದ್ಯಾಮಾನಕ್ಕೆ ಸಾಕ್ಷಿಯಾಯಿತು. ಜಿಎಸ್‌ಬಿ ಸಮಾಜದ ಮೂವರು ಯತಿಶ್ರೇಷ್ಠರ ಅಪೂರ್ವ ಸಮಾಗಮ ದರ್ಶಿಸುವ ಯೋಗ ಸ್ಥಳೀಯರದ್ದಾಯಿತು. 

ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಎಸ್‌ಬಿ ಸಮಾಜದ ಮೂವರು ಯತಿಗಳಾದ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟಶಿಷ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ, ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ತೀರ್ಥ ಸ್ವಾಮೀಜಿಯವರು ಅಪರೂಪವೆಂಬಂತೆ ಜಂಟಿಯಾಗಿ ಮಂಗಳವಾರ ಸಂಜೆ ಗಂಗೊಳ್ಳಿ ಪುರಪ್ರವೇಶ ಮಾಡಿದರು. 

ವೇದಘೋಷ, ವಿವಿಧ ವಾದ್ಯ ನಾದಗಳೊಂದಿಗೆ ಉಭಯ ಶ್ರೀಗಳಿಗೆ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜು ಬಳಿ ಪೂರ್ಣಕುಂಭ ಸ್ವಾಗತದೊಂದಿಗೆ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ಪುರಮೆರವಣಿಗೆ ನಡೆಸಲಾಯಿತು. ನೆರೆದಿದ್ದ ಸಹಸ್ರಾರು ಮಂದಿ ಭಜಕರು ಮೂವರು ಯತಿವರ್ಯರನ್ನು ಒಟ್ಟಿಗೆ ನೋಡಿ ಪುಳಕಿತರಾದರು. ಮೂವರು ಪೀಠಾಧಿಪತಿಗಳು ಸಮಾಗಮದಿಂದ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಪುರ ಮೆರವಣಿಗೆ ಗಂಗೊಳ್ಳಿಯ ಮುಖ್ಯರಸ್ತೆಯಲ್ಲಿ ಸಾಗುತ್ತಿದ್ದಂತೆ ಮಳೆಯ ಸಿಂಚನ ಪುಷ್ಪವಷ್ಟಿ ನಡೆಯಿತು. 

ಮಲ್ಯರಮಠಕ್ಕೆ ಮೂವರು ಪೀಠಾಧೀಪತಿಗಳ ಭೇಟಿ:ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಶ್ರೀಪಾದರ ಪಟ್ಟ ಶಿಷ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ, ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ತೀರ್ಥ ಸ್ವಾಮೀಜಿಯವರು ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು. 

ದೇವಸ್ಥಾನಕ್ಕೆ ಚಿತ್ತೈಸಿದ ಮೂವರು ಯತಿವರ್ಯರನ್ನು ದೇವಳದ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಬರ ಮಾಡಿಕೊಳ್ಳಲಾಯಿತು. ದೇವಳದ ಆಡಳಿತ ಮೊಕ್ತೇಸರ ಬೈಲೂರು ಮಂಜುನಾಥ ಶೆಣೈ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ವೇದಮೂರ್ತಿ ಜಿ.ವಸಂತ ಭಟ್, ಸಮಾಜದ ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಹತ್ತು ಸಮಸ್ತರು ಶ್ರೀಗಳವರನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಿಕೊಂಡರು. ಶ್ರೀದೇವರ ದರ್ಶನ ಪಡೆದ ಮೂವರು ಯತಿವರ್ಯರು ಬಳಿಕ ಆಶೀರ್ವಚನ ನೀಡಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com