ಜನ-ಸಂಸ್ಕೃತಿ ಸಂಭ್ರಮ 2015 ಉದ್ಘಾಟನೆ

ಬೈಂದೂರು: ಅನಾದಿಕಾಲದಿಂದಲೂ ಸಮಾಜಕ್ಕೆ ಪುರಾಣ, ರಾಮಾಯಣ, ಮಹಾಭಾರತದ ಕಥೆಗಳನ್ನು ಸಮೃದ್ಧವಾಗಿ ಉಣಬಡಿಸಿದ್ದು ಯಕ್ಷಗಾನ ಕಲೆ ಮಾತ್ರ. ಯಕ್ಷಗಾನದಲ್ಲಿ ಭಾಷೆಯ ಸ್ಪಷ್ಟ ಪ್ರಯೋಗಿಂದಾಗಿ ಇಂದಿಗೂ ಕನ್ನಡ ನುಡಿ ಸಮೃದ್ಧವಾಗಿ ಉಳಿದಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ ಹೇಳಿದರು. 
ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಯುಸ್ಕೋರ್ಡ್ ಟ್ರಸ್ಟ್ (ರಿ) ಬೈಂದೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಆಯೋಜಿಸಿದ ಐದು ದಿನಗಳ ಜನ-ಸಂಸ್ಕೃತಿ ಸಂಭ್ರಮ ೨೦೧೫ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಯಕ್ಷಗಾನವನ್ನು ನಿರಂತರವಾಗಿ ನೋಡುವುದರೊಂದಿಗೆ ಒಂದಿಷ್ಟು ಕಲಾವಿದರು ಹುಟ್ಟಿಕೊಳ್ಳುವಂತಾಗಲಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಯಕ್ಷಗಾನದ ಉಳಿವಿಗೆ ಕಟಿಬದ್ಧವಾಗಿದೆ ಭರವಸೆಯಿತ್ತರು.
ಯಕ್ಷೋತ್ಸವವನ್ನು ಉದ್ಘಾಟಿಸಿದ ಕೊಲ್ಲೂರು ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅರುಣಪ್ರಕಾಶ್ ಶೆಟ್ಟಿ ಮಾತನಾಡಿ ಕಲೆ ನಾಶವಾದರೆ ಸಂಸ್ಕೃತಿ ನಾಶವಾದಂತೆ. ಕಲೆಯ ಬಗ್ಗೆ ಕಿಂಚಿತ್ತಾದರೂ ಅಭಿಮಾನವಿಟ್ಟುಕೊಂಡರೆ ಮಾತ್ರ ಅದರ ಉಳಿವು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಭಾಗವತ ಕೆ. ಪಿ ಹೆಗಡೆ ಉಪಸ್ಥಿತರಿದ್ದರು. ಯುಸ್ಕೋರ್ಡ್ ಟ್ರಸ್ಟ್‌ನ ಕೃಷ್ಣಮೂರ್ತಿ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಧಾಕರ ಪಿ. ಸ್ವಾಗತಿಸಿದರು. ಶ್ರೀ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಾಗರಾಜ ಅಡಿಗ ಕಾರ್ಯಕ್ರಮ ನಿರೂಪಿಸಿದರು. 
ಯುಸ್ಕೋರ್ಡ್ ಟ್ರಸ್ಟ್ (ರಿ) ಬೈಂದೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಆಯೋಜಿಸಿದ ಜನಸಂಸ್ಕೃತಿ ಸಂಭ್ರಮ ೨೦೧೫ರ ಮಹಿಳಾ ಯಕ್ಷವೈಭವದಲ್ಲಿ ಕೋಟ ಗಿಳಿಯಾರು ಯಕ್ಷ ಮಹಿಳಾ ಬಳಗದಿಂದ ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com