ಗಂಗೊಳ್ಳಿಯಲ್ಲಿ ವನಮಹೋತ್ಸವ

ಗಂಗೊಳ್ಳಿ: ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ೪೦ನೇ ವರ್ಷ ಸಂಭ್ರಮಾಚರಣೆಯ ಪ್ರಯುಕ್ತ ವನಮಹೋತ್ಸವ ಆಚರಣೆ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರಗಿತು.

ಸಸಿಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಪ್ರದೀಪ ಡಿ.ಕೆ. ಮಾತನಾಡಿ, ಮರಗಳನ್ನು ನಾಶ ಮಾಡಿ ಕಾಂಕ್ರೀಟ್ ಯುಗಕ್ಕೆ ಕಾಲಿಡುತ್ತಿರುವ ಈ ಕಾಲಘಟ್ಟದಲ್ಲಿ ಗಿಡಮರಗಳನ್ನು ಬೆಳಸಬೇಕಾದ ಅನಿವಾರ್ಯತೆ ಬಗ್ಗೆ ಮತ್ತು ಪರಿಸರ ಸಂರಕ್ಷಣೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಒಂದು ಮರ ಕಡಿದರೆ ಎರಡು ಸಸಿಗಳನ್ನು ನೆಟ್ಟು ಅದರ ಆರೈಕೆ ಮಾಡಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಪ್ರತಿವರ್ಷ ವನಮಹೋತ್ಸವ ಆಚರಣೆ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದರು.

ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್, ಕಾರ್ಯದರ್ಶಿ ರಾಮನಾಥ ಚಿತ್ತಾಲ್ ಉಪಸ್ಥಿತರಿದ್ದರು.

ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್ ಸ್ವಾಗತಿಸಿದರು. ನಾಗರಾಜ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ರಾಮನಾಥ ಚಿತ್ತಾಲ್ ವಂದಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಸಾಗುವಾನಿ, ಮಾವು, ಹಲಸು ಮುಂತಾದ ಉತ್ತಮ ಜಾತಿಯ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com