ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೆಸ್ಕಾಂ ಸಬ್ ಸ್ಟೇಶನ್ ಕಾರ್ಯಾರಂಭ ಮಾಡದಿರುವ ಹಿನ್ನಲೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ಜು.೨೬ರಂದು ಸಂಜೆ ೪ ಗಂಟೆಗೆ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮೆಸ್ಕಾಂ ಗ್ರಾಹಕರ ಹಾಗೂ ನಾಗರಿಕರ ಸಭೆ ಆಯೋಜಿಸಲಾಗಿದೆ ಎಂದು ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಎಚ್.ಎಸ್.ಚಿಕ್ಕಯ್ಯ ಪೂಜಾರಿ ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ವರ್ಷಗಳ ಹಿಂದೆ ಗಂಗೊಳ್ಳಿ ಮೆಸ್ಕಾಂ ಸಬ್ಸ್ಟೇಶನ್ನ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮುಳ್ಳಿಕಟ್ಟೆಯಿಂದ ಗುಜ್ಜಾಡಿಯವರೆಗೆ ಸುಮಾರು ಅರ್ಧ ಕಿಮೀ ದೂರ ವಿದ್ಯುತ್ ಮಾರ್ಗ ಎಳೆಯುವ ಬಗ್ಗೆ ಅರಣ್ಯ ಇಲಾಖೆ ಕ್ಯಾತೆ ತೆಗೆದಿದೆ ಎನ್ನಲಾಗಿದ್ದು, ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಿಕೊಂಡು ಇನ್ನೊಂದು ತಿಂಗಳ ಒಳಗಾಗಿ ಗಂಗೊಳ್ಳಿ ಮೆಸ್ಕಾಂ ಸಬ್ಸ್ಟೇಶನ್ ಕಾರ್ಯಾರಂಭ ಮಾಡಬೇಕೆನ್ನುವ ಆಗ್ರಹ ಮನವಿಯನ್ನು ಮೆಸ್ಕಾಂ ಅಧಿಕಾರಿಗಳಲ್ಲಿ ಮಾಡಿಕೊಳ್ಳಲಾಗಿತ್ತು. ಆದರೆ ಗಂಗೊಳ್ಳಿ ಗ್ರಾಮಸ್ಥರ ಬೇಡಿಕೆಗೆ ಮೆಸ್ಕಾಂ ಹಾಗೂ ಸಂಬಂಧಪಟ್ಟರ ಇಲಾಖೆಯವರು ಸ್ಪಂದಿಸದಿರುವುದನ್ನು ಖಂಡಿಸಿ ಹಾಗೂ ಗಂಗೊಳ್ಳಿ ಸಬ್ಸ್ಟೇಶನ್ ಕೂಡಲೇ ಕಾರ್ಯಾರಂಭ ಮಾಡಬೇಕೆನ್ನುವ ಉದ್ದೇಶದಿಂದ ಮುಂದಿನ ಹೋರಾಟದ ಬಗ್ಗೆ ರೂಪುರೇಷೆಗಳ ಚರ್ಚೆ ನಡೆಸಲು ಸಭೆಯನ್ನು ಆಯೋಜಿಸಲಾಗಿದ್ದು, ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಹಕರು, ಉದ್ಯಮಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರಿಕರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಎಚ್.ಎಸ್.ಚಿಕ್ಕಯ್ಯ ಪೂಜಾರಿ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.
0 comments:
Post a Comment