ಹೆಮ್ಮಾಡಿ: ಕಾಲೇಜು ವಿದ್ಯಾರ್ಥಿ ವೇದಿಕೆ ಉದ್ಘಾಟನೆ

ಕುಂದಾಪುರ: ವಿದ್ಯಾರ್ಥಿ ವೇದಿಕೆಯ ಮೂಲಕ ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ವ್ಯಯಿಸಿದಾಗ ಜೀವನ ಸಾರ್ಥಕವೆನಿಸಿಕೊಳ್ಳುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಪ.ಪೂ.ಕಾಲೇಜಿನ ಪ್ರಾಂಶುಪಾಲ ಅರುಣ ಪ್ರಕಾಶ್ ಶೆಟ್ಟಿ ಹೇಳಿದರು.

ಅವರು ಹೆಮ್ಮಾಡಿ ಜನತಾ ಪ.ಪೂ.ಕಾಲೇಜಿನ ವಿದ್ಯಾರ್ಥಿವೇದಿಕೆ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಳೆದು ಹೋದ ಸಂಗತಿಗಳನ್ನು ಮರೆತು ಭವಿಷ್ಯದಲ್ಲಿ ಇನ್ನೆನೋ ಆಗುತ್ತೆ ಎಂಬ ಭಯ ಬಿಟ್ಟು ಸಕರಾತ್ಮಕವಾಗಿ ಚಿಂತಿಸಿ, ಸದೃಢವಾದ ದೇಹದಲ್ಲಿ ಮನಸ್ಸು ಮತ್ತು ಬುದ್ಧಿಯನ್ನು ತನ್ನ ಹತೋಟಿಯಲ್ಲಿಟ್ಟುಕೊಂಡಾಗ ಉತ್ತಮ ಸಂಸ್ಕಾರದೊಂದಿಗೆ ನಮ್ಮ ವ್ಯಕ್ತಿತ್ವ ಬೆಳೆಯಲು ಸಾದ್ಯ. ಅದಕ್ಕೆ ಪೂರಕವಾಗಿ ನಮ್ಮ ಬದುಕು ಹೊಂದಿಕೊಂಡು ಸಕರಾತ್ಮಕ ಚಿಂತನೆ ಬಲಾಡ್ಯಗೊಳ್ಳುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಸಭೆಯ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜನತಾ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬಿ.ಮೋಹನದಾಸ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಸುಪ್ತವಾದ ಪ್ರತಿಭೆ ಹುದುಗಿರುತ್ತದೆ. ಜೊತೆಯಲ್ಲಿ ಸಂಸ್ಕಾರ,ಸದ್ಬಾವ- ಸದ್ಗುಣಗಳನ್ನು ಮೈಗೂಡಿಸಿಕೊಂಡಾಗ ನಮ್ಮ ಬದುಕು ಸುಂದರವಾಗುತ್ತದೆ ಎಂದರು.

ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ನಿತೇಶ್ ಬಂಗೇರ, ಉಪಾಧ್ಯಕ್ಷ ಗೌತಮ ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ  ಶ್ರೇಣಿಯಲ್ಲಿ  ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದ ವಾಣಿಜ್ಯ ವಿಭಾಗದ ಸುಗುಣ, ಕರಣ ಕುಮಾರ ಮತ್ತು ಪ.ಪಂಗಡದ ವಿದ್ಯಾರ್ಥಿನಿ ವೈಶಾಲಿ ಅವರನ್ನು ಗೌರವಿಸಲಾಯಿತು. ನಿವೃತ್ತ ಕೆನರಾ ಬ್ಯಾಂಕ್ ಸೀನಿಯರ್ ಮೆನೇಜರ್ ಲೊಬೋ ಅವರು ಪ್ರತಿಭಾ ಪುರಸ್ಕಾರದ ಪ್ರಾಯೋಜಕರಾಗಿದ್ದರು.

ಸಮಾಜ ಶಾಸ್ತ್ರ ಉಪನ್ಯಾಸಕಿ ಗೀತಾ ಜೋಷಿ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ ಚಂದನ್ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ವಿವರ ನೀಡಿದರು. ಗಣಕ ವಿಜ್ಞಾನ ಉಪನ್ಯಾಸಕ ಹರೀಶ್ ಕಾಂಚನ್ ವಿದ್ಯಾರ್ಥಿ ವೇದಿಕೆ ವರದಿ ಮಂಡಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಜೆಸ್ಸಿ ಡಿಸಿಲ್ವ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.  ಇಂಗ್ಲೀಷ್ ಭಾಷಾ ಉಪನ್ಯಾಸಕಿ ಶ್ರೀಲತಾ.ಕೆ ಅವರು ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com