ಕೃಷಿ ಅಭಿಯಾನ: ಮರವಂತೆಯಲ್ಲಿ ರೈತರೊಂದಿಗೆ ಸಂವಾದ

ಬೈಂದೂರು: ಹೋಬಳಿ ಮಟ್ಟದ ಕೃಷಿ ಅಭಿಯಾನ 2015-16ರ ಅಂಗವಾಗಿ ಮಂಗಳವಾರ ಮರವಂತೆಗೆ ರೈತ ರಥ ಆಗಮಿಸಿದ ಸಂದರ್ಭದಲ್ಲಿ ಅಲ್ಲಿನ ಗ್ರಾಮ ಪಂಚಾಯತ್‌ನಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಮೋಹನ್‌ರಾಜ್ ಕೃಷಿ ಸಂಬಂಧೀ ಇಲಾಖೆಗಳಾದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಅರಣ್ಯ ಇಲಾಖೆಗಳನ್ನು ರೈತರ ಬಳಿಗೆ ಒಯ್ಯುವುದು ಈ ಅಭಿಯಾನದ ಉದ್ದೇಶ. ಈ ಸಂದರ್ಭದಲ್ಲಿ ರೈತರು ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳ ಜತೆ ಸಂವಾದ ನಡೆಸಿ ಮಾಹಿತಿ ಪಡೆಯಬಹುದು. ಇಲಾಖೆಗಳ ವಿವಿಧ ಯೋಜನೆಗಳ ಕುರಿತು ತಿಳಿದುಕೊಳ್ಳಬಹುದು. ನೂತನ ಆವಿಷ್ಕಾರಗಳ ತಿಳಿವಳಿಕೆ ಪಡೆಯಬಹುದು. ಎಲ್ಲಕ್ಕಿಂತ ಅಧಿಕವಾಗಿ ರೈತರು ತಮ್ಮ ಕಾಯಕದ ಸಂದರ್ಭದಲ್ಲಿ ಎದುರಿಸುವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು ಎಂದರು. 

ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ. ನವೀನ್, ಪಶು ವೈದ್ಯ ಅರುಣ್, ತೋಟಗಾರಿಕಾ ಅಧಿಕಾರಿ ರೇಷ್ಮಾ, ಅರಣ್ಯ ಇಲಾಖೆಯ ಅನಸೂಯಾ, ಕೃಷಿ ಅಧಿಕಾರಿ ಗಾಯತ್ರಿದೇವಿ ಉಪಸ್ಥಿತರಿದ್ದು ವಿವಿಧ ವಿಷಯಗಳ ಕುರಿತು ರೈತರಿಗೆ ಮಾಹಿತಿ ನೀಡಿ, ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಆರ್. ಕೆ ಅಧ್ಯಕ್ಷತೆ ವಹಿಸಿದ್ದರು. ಗ್ರಾ ಪಂ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಕಾರ‍್ಯಕ್ರಮದ ಉಪಯುಕ್ತತೆಯ ಬಗ್ಗೆ ಮಾತನಾಡಿದರು. ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್ ವಂದಿಸಿದರು. ಗ್ರಾಪಂ ಉಪಾಧ್ಯಕ್ಷ ಗಣೇಶ ಕೆ. ಪೂಜಾರಿ, ಸದಸ್ಯರು ಇದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com